ಬೆಳಗಾವಿ : ಕರ್ನಾಟಕ ವಾಯುವ್ಯ ಶಿಕ್ಷಕರು/ಪದವಿಧರರ ಮತ ಕ್ಷೇತ್ರದ ಮತದಾರರ ಪಟ್ಟಿಯನ್ನು ಜನವರಿ 17 ರಂದು
ಪ್ರಕಟಿಸಲಾಗಿದೆ.
ಈ ಮತದಾರರ ಪಟ್ಟಿಯು ಮತದಾರರ ನೋಂದಣಿ ಅಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು, ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ, ಜಿಲ್ಲಾಧಿಕಾರಿಗಳು ಬೆಳಗಾವಿ, ಬಾಗಲಕೋಟೆ, ವಿಜಯಪುರ, ಇವರುಗಳ ಕಚೇರಿಯಲ್ಲಿ ಹಾಗೂ ಅವರ ವ್ಯಾಪ್ತಿಯಲ್ಲಿ ಬರುವ ಎಲ್ಲ
ನಿಯೋಜಿತ ಅಧಿಕಾರಿಗಳ ಕಚೇರಿಯಲ್ಲಿ ಲಭ್ಯವಿರುತ್ತದೆ.
ಅದೇ ರೀತಿ ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರು ಇವರ www.ceokarnataka.kar.nic.in ವೆಬ್ಸೈಟ್ನಲ್ಲಿಯೂ ಸಹ ಲಭ್ಯವಿರುತ್ತದೆ ಎಂದು ವಾಯವ್ಯ ಶಿಕ್ಷಕರ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.