ಗದಗ ಅಗಸ್ಟ ೩೦: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗಳು ಸೆಪ್ಟೆಂಬರ್ ೩ ರಂದು ಜರುಗಲಿವೆ. ಈ ಪರೀಕ್ಷೆಯ ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳ ರಹಸ್ಯ ಬಂಡಲ್‌ಗಳನ್ನು ಖಜಾನೆಯಲ್ಲಿ ಸಂರಕ್ಷಿಸಿಡಲು ಪರೀಕ್ಷಾ ದಿನದಂದು ಪ್ರತಿ ಪರೀಕ್ಷಾ ವಿಷಯದ ಪ್ರಶ್ನೆ ಪತ್ರಿಕೆ/ ಉತ್ತರ ಪತ್ರಿಕೆಗಳನ್ನು ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಪ್ರಕ್ರಿಯೆಯನ್ನು ಕಾರ್ಯಗತಗೊಳಿಸಲು ಹಾಗೂ ಪ್ರತಿ ಅವಧಿಯ ಪರೀಕ್ಷೆ ಮುಗಿದ ನಂತರ ಎಲ್ಲ ಪರೀಕ್ಷಾ ಕೇಂದ್ರಗಳಿಂದ ರಹಸ್ಯ ಬಂಡಲ್‌ಗಳನ್ನು ಸ್ವೀಕರಿಸಿ ಖಜಾನೆಯಲ್ಲಿ ಸಂರಕ್ಷಿಸಿಡಲು ತ್ರಿ-ಸದಸ್ಯ ಸಮಿತಿಯನ್ನು ರಚಿಸಲಾಗಿದೆ. ತ್ರಿ-ಸದಸ್ಯ ಸಮಿತಿಯ ಅಧಿಕಾರಿಗಳು ಯಾವುದೇ ಲೋಪದೋಷಗಳಿಲ್ಲದೇ ಸುವ್ಯವಸ್ಥಿತವಾಗಿ ಕ್ರಮ ವಹಿಸಲು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಆದೇಶಿಸಿದ್ದಾರ.
Gadi Kannadiga > State > ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ತ್ರಿ ಸದಸ್ಯ ಸಮಿತಿ ನೇಮಕ
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ತ್ರಿ ಸದಸ್ಯ ಸಮಿತಿ ನೇಮಕ
Suresh30/08/2023
posted on