This is the title of the web page
This is the title of the web page

Please assign a menu to the primary menu location under menu

Local News

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಕೆ.ಗಿರೀಶ್ ಅವರ ಜಿಲ್ಲಾ ಪ್ರವಾಸ ಸೆ.೨೦ ರಿಂದ ಸೆ.೨೪ರವರೆಗೆ ಮುಖಂಡರೊಂದಿಗೆ ಸಭೆ ಹಾಗೂ ಸಮಾಲೋಚನೆ


ಬೆಳಗಾವಿ,ಸೆ.೨೦: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಕೆ.ಗಿರೀಶ್ ಅವರು ಸೆ.೨೦ರಿಂದ ೨೪ ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮಂಗಳವಾರ (ಸೆ.೨೦) ಸಂಜೆ ೪.೩೦ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿದು ಸಂಜೆ ೫.೩೦ಕ್ಕೆ ಹುಕ್ಕೇರಿ ಪಟ್ಟಣದಲ್ಲಿ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.
ಬುಧವಾರ (ಸೆ.೨೧) ೧೨ಕ್ಕೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದು, ಮಧ್ಯಾಹ್ನ ೧ ಗಂಟೆಗೆ ಬೈಲಹೊಂಗಲದ ವಿಜಯ ಸೋಶಿಯಲ್ ಕ್ಲಬ್‌ನಲ್ಲಿ ಸಮಾಜದ ಮುಖಂಡರೊಂದಿಗೆ ಸಭೆ ಹಾಗೂ ಸಮಾಲೋಚನೆ ನಡೆಸಲಿದ್ದಾರೆ. ಸಂಜೆ ೪ ಗಂಟೆಗೆ ಬೈಲಹೊಂಗಲ ತಾಲೂಕಿನ ಪಟ್ಟಿಹಾಳ ಗ್ರಾಮದ ಅನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಆವರಣದಲ್ಲಿ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಲಿದ್ದು, ಸಂಜೆ ೬ ಗಂಟೆಗೆ ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮ ಪಂಚಾಯಿತಿ ಆವರಣದ ಸಭಾ ಭವನದಲ್ಲಿ ಸಮಾಜದ ಮುಖಂಡರೊಂದಿಗೆ ಸಭೆ ಮತ್ತು ಸಮಾಲೋಚನೆ ನಡೆಸಲಿದ್ದಾರೆ.
ಗುರುವಾರ (ಸೆ.೨೨) ಬೆಳಿಗ್ಗೆ ೮ ಗಂಟೆಗೆ ಸವದತ್ತಿ ಸುಕ್ಷೇತ್ರದ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ಬೆಳಿಗ್ಗೆ ೧೦ ಗಂಟೆಗೆ ಸವದತ್ತಿ ಪಟ್ಟಣದ ಶ್ರೀ ಭಗೀರಥ ಮಹರ್ಷಿ ದೇವಸ್ಥಾನದಲ್ಲಿ ಸಮಾಜದ ಮುಖಂಡರೊಂದಿಗೆ ಸಭೆ, ಸಮಾಲೋಚನೆ ನಡೆಸಲಿದ್ದಾರೆ. ಮಧ್ಯಾಹ್ನ ೧೨ .೩೦ಕ್ಕೆ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಅರ್ಬನ್ ಕೋ-ಆಪರೇಟಿವ್ ಸೊಸೈಟಿಯ ಬೆಳ್ಳಿ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ೫ ಗಂಟೆಗೆ ಸವದತ್ತಿ ತಾಲೂಕಿನ ಅರ್ಟಗಲ್ ಗ್ರಾಮದಲ್ಲಿ ಸಮಾಜದ ಮುಖಂಡರೊಂದಿಗೆ ಸಭೆ ಹಾಗೂ ಸಮಾಲೋಚನೆ ನಡೆಸಲಿದ್ದಾರೆ.
ಶುಕ್ರವಾರ (ಸೆ.೨೩) ಬೆಳಿಗ್ಗೆ ೧೦ ಗಂಟೆಗೆ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದ ಶ್ರೀ ಭಗೀರಥ ಮಹರ್ಷಿ ದೇವಸ್ಥಾನದಲ್ಲಿ ಸಮಾಜದ ಮುಖಂಡರೊಂದಿಗೆ ಸಭೆ, ಸಮಾಲೋಚನೆ ನಡೆಸಲಿದ್ದಾರೆ. ಮಧ್ಯಾಹ್ನ ೩ ಗಂಟೆಗೆ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ಸಮಾಜದ ಮುಖಂಡರೊಂದಿಗೆ ಸಭೆ ಹಾಗೂ ಸಮಾಲೋಚನೆ ನಡೆಸಲಿದ್ದಾರೆ. ಸಂಜೆ ೫ ಗಂಟೆಗೆ ರಾಯಬಾಗ ತಾಲೂಕಿನ ಸುಕ್ಷೇತ್ರ ಚಿಂಚಣಿಗೆ ಭೇಟಿ ನೀಡಿ ಶಕ್ತಿ ದೇವತೆ ಶ್ರೀ ಮಾಯಕ್ಕದೇವಿ ದರ್ಶನ ಹಾಗೂ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.
ಶನಿವಾರ (ಸೆ.೨೪) ಬೆಳಿಗ್ಗೆ ೧೦ ಗಂಟೆಗೆ ಗೋಕಾಕ ಪಟ್ಟಣದ ಮಹಾಲಕ್ಷ್ಮೀ ಸಭಾ ಭವನದಲ್ಲಿ ನಡೆಯುವ ಬೆಳಗಾವಿ ಜಿಲ್ಲಾ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Gadi Kannadiga

Leave a Reply