This is the title of the web page
This is the title of the web page

Please assign a menu to the primary menu location under menu

Local News

ಕಸಾಪ ೧೦೯ ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ


ಬೆಳಗಾವಿ: ೩-ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆಯ, ಕ.ಸಾ.ಪ ೧೦೯ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ಶುಕ್ರವಾರ ದಿ:೦೫/೦೫/೨೦೨೩ರಂದು, ಸಮಯ:ಮುಂಜಾನೆ:೧೧:೩೦ಕ್ಕೆ, ಸ್ಥಳ:“ಕನ್ನಡ ಭವನ”À ನೆಹರು ನಗರ, ರಾಮದೇವ ಹೊಟೇಲ್ ಹಿಂದೆ ಬೆಳಗಾವಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟಕರಾಗಿ ಬೆಳಗಾವಿ ಹಸಿರುಕ್ರಾಂತಿ ದಿನಪತ್ರಿಕೆ ಸಂಪಾದಕರು ಶ್ರೀ.ಸಂಪತಕುಮಾರ ಮುಚಳಂಬಿ ಇವರು ಆಗಮಿಸಲಿದ್ದಾರೆ. ಕ.ಸಾ.ಪ. ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಮತಿ.ಮಂಗಲಾ ಶ್ರೀ ಮೆಟಗುಡ್ಡ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಬೆಳಗಾವಿಯ ಶ್ರೀ.ಎಂ.ವ್ಹಿ ಭಟ್ಟ ಅವರು “ಕನ್ನಡ ಸಾಹಿತ್ಯ ಪರಿಷತ್ತು ಸಾಗಿ ಬಂದ ದಾರಿ” ವಿಷಯದ ಕುರಿತು ಉಪನ್ಯಾಸವನ್ನು ನೀಡಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿಯ ಶ್ರೀಮತಿ.ರೇವತಿ ಶಿವಯ್ಯಾ ಹೊಸಮಠ ಮತ್ತು ಹಾವೇರಿ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ವಿಜಯಲಕ್ಷ್ಮೀ ಪುಟ್ಟಿ ಅವರಿಗೆ ಸನ್ಮಾನ ಮಾಡಲಾಗುತ್ತದೆ. ಬೆಳಗಾವಿಯ ಹಿರಿಯ ಸಾಹಿತಿಗಳಾದ ಶ್ರೀ.ಸ.ರಾ.ಸುಳಕೂಡೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶ್ರೀ.ಎಂ.ವೈ.ಮೆಣಸಿನಕಾಯಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಶ್ರೀ.ವೀರಭದ್ರಪ್ಪ ಅಂಗಡಿ ಅವರು ಪರಿಚಯವನ್ನು ಮಾಡಲಿದ್ದಾರೆ. ಶ್ರೀಮತಿ.ಸುಮಾ ಬೇವಿನಕೊಪ್ಪಮಠ ಹಾಗೂ ಸಂಗಡಿಗರಿಂದ ನಾಡಗೀತೆ. ಶ್ರೀಮತಿ.ಪ್ರತಿಭಾ ಕಳ್ಳಿಮಠ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡಲಿದ್ದಾರೆ. ಪತ್ರಕರ್ತರ ಅಧ್ಯಕ್ಷರು, ಸಂಪಾದಕರಾದ ಶ್ರೀ.ಮುರಗೇಶ ಶಿವಪೂಜೆ ಅವರು ಗೌರವ ಉಪಸ್ಥಿತಿಯಲ್ಲಿರುವರು. ಕ.ಸಾ.ಪ. ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕಾ ಅಧ್ಯಕ್ಷರುಗಳು, ಹಾಗೂ ಜಿಲ್ಲಾ ಕ.ಸಾ.ಪ. ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು, ಕ.ಸಾ.ಪ. ಸರ್ವ ಸದಸ್ಯರು, ಸಾಹಿತಿಗಳು, ಕಲಾವಿದರು ಮತ್ತು ಕನ್ನಡಪರ ಸಂಘಟನೆಗಳು, ಸಮಸ್ತ ಕನ್ನಡ ಮನಸ್ಸುಗಳು ಎಲ್ಲರೂ ಈ ಕಾರ್ಯಕ್ರಮಕ್ಕೆ ಆಗಮಿಸಿ ಶೋಭೆತರಬೇಕೆಂದು, ಕಸಾಪ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಗಲಾ ಶ್ರೀ ಮೆಟಗುಡ್ಡ ವಿನಂತಿಸಿಕೊಂಡಿದ್ದಾರೆ.


Leave a Reply