ಕೊಪ್ಪಳ ಏಪ್ರಿಲ್ ೨೦ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಉಲಂಘನೆ ಪ್ರಕರಣಗಳ ಬಗ್ಗೆ ನಿಗಾವಹಿಸಲು ಸಿ-ವಿಜಿಲ್ ಆ್ಯಪ್ ಪರಿಚಯಿಸಿದೆ. ಮತದಾರರು ಈ ಸಿವಿಜಿಲ್ ಆ್ಯಪನ್ನು ಡೌನ್‌ಲೋಡ್ ಮಾಡಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಈ ಮೂಲಕ ದೂರುಗಳನ್ನು ದಾಖಲಿಸಲು ಅನುಕೂಲವಾಗುವ ಮಾಹಿತಿ ಕುರಿತಾದ ಪೋಸ್ಟರ್ಸ್ನ್ನು ಕೊಪ್ಪಳ ತಹಸೀಲ್ದಾರ ಕಾರ್ಯಾಲಯದಲ್ಲಿ ಏಪ್ರಿಲ್ ೨೦ರಂದು ಬಿಡುಗಡೆ ಮಾಡಲಾಯಿತು.
೬೪-ಕೊಪ್ಪಳ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಾದ ಮಲ್ಲಿಕಾರ್ಜುನ್ ಅವರು ಪೋಸ್ಟರ್ಸ್ ಬಿಡುಗಡೆಗೊಳಿಸಿ ಬಳಿಕ ಮಾತನಾಡಿ, ಮಾದರಿ ನೀತಿ ಸಂಹಿತೆ ಉಲಂಘನೆ ಬಗ್ಗೆ ಸಾರ್ವಜನಿಕರು ಆನ್‌ಲೈನ್‌ದಲ್ಲಿ ಸಿ-ವಿಜಿಲ್ ತಂತ್ರಾಂಶದ ಮೂಲಕ ದೂರನ್ನು ದಾಖಲಿಸಬಹುದಾಗಿದ್ದು, ಈ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ಹಾಗೂ ಅಗತ್ಯ ತಿಳುವಳಿಕೆಗಾಗಿ ಪೋಸ್ಟರ್ಸ್ಗಳು ಸಹಕಾರಿಯಾಗಿವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಹಾಗೂ ಕೊಪ್ಪಳ ತಹಸೀಲ್ದಾರರಾದ ಅಮರೇಶ್ ಬಿರಾದಾರ್, ಪ್ರೊಬೇಷನರಿ ತಹಸೀಲ್ದಾರ ನೇತ್ರಾವತಿ ಸೇರಿದಂತೆ ಎಲ್ಲಾ ಸೆಕ್ಟರ್ ಅಧಿಕಾರಿಗಳು ಉಪಸ್ಥಿತರಿದ್ದರು.
Gadi Kannadiga > State > ಕೊಪ್ಪಳ ವಿಧಾನಸಭಾ ಕ್ಷೇತ್ರ: ಸಿ-ವಿಜಿಲ್ ತಂತ್ರಾಂಶದ ಪೋಸ್ಟರ್ಸ್ ಬಿಡುಗಡೆ
ಕೊಪ್ಪಳ ವಿಧಾನಸಭಾ ಕ್ಷೇತ್ರ: ಸಿ-ವಿಜಿಲ್ ತಂತ್ರಾಂಶದ ಪೋಸ್ಟರ್ಸ್ ಬಿಡುಗಡೆ
Suresh20/04/2023
posted on

More important news
ಪ್ರತಿಬಂಧಕಾಜ್ಞೆ ಜಾರಿ
08/06/2023