This is the title of the web page
This is the title of the web page

Please assign a menu to the primary menu location under menu

State

ಕೊಪ್ಪಳ ರಜತ್ ಮಹೋತ್ಸವ ಪ್ರಚಾರಾರ್ಥ ಆರೋಗ್ಯ ತಪಾಸಣೆ


ಕೊಪ್ಪಳ ಫೆಬ್ರವರಿ ೨೮ : ಜಿಲ್ಲಾ ರಜತ್ ಮಹೋತ್ಸವ ಪ್ರಚಾರಾರ್ಥ ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಫೆಬ್ರವರಿ ೨೭ ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ತಪಾಸಣಾ ಶಿಬರ ನಡೆಯಿತು.
ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಈ ಹಿಂದೆ ನಡೆದ ಸಭೆಯಲ್ಲಿ ಉತ್ಸವದ ಪ್ರಚಾರಾರ್ಥ ಇಲಾಖೆಗಳು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಈಗಾಗಲೇ ವಿವಿಧ ಇಲಾಖೆಗಳಿಂದ ನಾನಾ ಕಾರ್ಯಕ್ರಮಗಳು ನಡೆದಿವೆ.
ಅದರಂತೆ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕವು ಎನ್.ಸಿ.ಡಿ ಕಾರ್ಯಕ್ರಮದಡಿ ಜಿಲ್ಲಾಡಳಿತ ಭವನದ ಆವರಣದಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಜಿಲ್ಲಾಡಳಿತ ಭವನದ ಮುಖ್ಯ ದ್ವಾರಗಳಲ್ಲಿ ಆರೋಗ್ಯ ತಪಾಸಣಾ ಸ್ಟಾಲ್‌ಗಳನ್ನು ತೆರೆದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಭವನಕ್ಕೆ ಆಗಮಿಸುತ್ತಿದ್ದ ಸಾರ್ವಜನಿಕರ ಮತ್ತು ನೌಕರರ ಆರೋಗ್ಯ ತಪಾಸಣೆಗೆ ನಡೆಸಲಾಯಿತು. ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯ ಇಲಾಖೆ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಿಬಿರದ ಅಂಗವಾಗಿ ಜಿಲ್ಲಾಡಳಿತ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ೪೦೦ ಜನ ನೌಕರರು ಮತ್ತು ಇತರೆ ೧೮೯ ಸೇರಿ ಒಟ್ಟು ೫೮೯ ಜನರಿಗೆ ಬಿಪಿ ಮತ್ತು ಆರ್.ಬಿ.ಎಸ್ (ಶುಗರ್) ಪರೀಕ್ಷೆ ಮಾಡಲಾಯಿತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ ಅಲಕನಂದಾ ಮಳಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ ನಂದಕುಮಾರ ಹೆಚ್., ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ ರಾಮಾಂಜನೇಯ, ವೈದ್ಯಾಧಿಕಾರಿಗಳಾದ ಡಾ ಪ್ರಶಾಂತ ತಟ್ಟಿ, ಡಾ ಪ್ರೀಯಾ ರಂಜನ್, ಜಿಲ್ಲಾ ಸರ್ವೇಕ್ಷಣಾ ಘಟಕದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಲ್.ವ್ಹಿ ಸಜ್ಜನರ್ ಹಾಗೂ ತಾಲ್ಲೂಕು ಸಿ.ಹೆಚ್.ಓ., ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.


Gadi Kannadiga

Leave a Reply