ಕೊಪ್ಪಳ ಜೂನ್ ೨೮ : ಕೊಪ್ಪಳ ತಾಲೂಕು ಪಂಚಾಯತ್ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ ೨೦ ಅಂಶಗಳು ಸೇರಿದಂತೆ ೨೦೨೩-೨೪ನೇ ಸಾಲಿನ ೧ನೇ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜೂನ್ ೩೦ರಂದು ಬೆಳಿಗ್ಗೆ ೧೦.೩೦ಗಂಟೆಗೆ ತಾ.ಪಂ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕೊಪ್ಪಳ ಶಾಸಕರಾದ ರಾಘವೇಂದ್ರ ಹಿಟ್ನಾಳ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಹಾಗೂ ಅನಿವಾರ್ಯ ಕಾರಣಗಳಿಂದ ಸಭೆಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ ಶಾಸಕರ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಕೊಪ್ಪಳ ತಾ.ಪಂ ೧ನೇ ತ್ರೆöÊಮಾಸಿಕ ಕೆಡಿಪಿ ಸಭೆ ಜೂನ್ ೩೦ಕ್ಕೆ
ಕೊಪ್ಪಳ ತಾ.ಪಂ ೧ನೇ ತ್ರೆöÊಮಾಸಿಕ ಕೆಡಿಪಿ ಸಭೆ ಜೂನ್ ೩೦ಕ್ಕೆ
Suresh28/06/2023
posted on
More important news
ಬೆಳಗಾವಿಯ ಹುಡುಗರ ಸಾಹಸ ” ಪರ್ಯಾಯ”
18/09/2023