ಬೆಳಗಾವಿ: ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯ ಗಣೇಶಪುರದ ಸಂಭಾಜೀ ನಗರದ ಹುತಾತ್ಮ ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ, ಮೃತ ಯೋಧನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈಚೆಗೆ ಮಧ್ಯಪ್ರದೇಶದ ಮೊರೆನಾ ಬಳಿ ಭಾರತೀಯ ಸೇನೆಯ ವಾಯು ವಿಮಾನಗಳು ಅಪಘಾತಕ್ಕಿಡಾಗಿ ಬೆಳಗಾವಿಯ ವಿಂಗ್ ಕಮಾಂಡರ್ ಹನುಮಂತರಾವ್ ಆರ್. ಸಾರಥಿ ಹುತಾತ್ಮರಾಗಿದ್ದರು. ಮೃತ ಯೋಧ ಹನುಮಂತರಾವ್ ಅವರ ತಂದೆ, ತಾಯಿ, ಪತ್ನಿ, ಮಕ್ಕಳಿಗೆ ಶಾಸಕ ಸತೀಶ್ ಜಾರಕಿಹೊಳಿ ಅವರು ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ್ ಪಾಟೀಲ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಸುನೀಲ್ ಹಣಮನ್ನವರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಇದ್ದರು.