This is the title of the web page
This is the title of the web page

Please assign a menu to the primary menu location under menu

Local News

ತೀವ್ರ ಕುತೂಹಲ ಮೂಡಿಸಿದ ಲಕ್ಷ್ಮೀ ಹೆಬ್ಬಾಳಕರ್ – ಮಾಜಿ ಸಿಎಂ ಯಡಿಯೂರಪ್ಪ ಭೇಟಿ


ಬೆಂಗಳೂರು : ಇಂದು  ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು , ತೀವ್ರ ಚರ್ಚೆಗೆ ಕಾರಣವಾಗಿದೆ.

ಇಂದು ಯಡಿಯೂರಪ್ಪ ಅವರ ಸರ್ಕಾರಿ ನಿವಾಸದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಯಡಿಯೂರಪ್ಪರನ್ನು ಭೇಟಿಯಾಗಿದ್ದು, ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. ಸದ್ಯ ಈ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಯಡಿಯೂರಪ್ಪ ಅವರ ಭೇಟಿ ಬಳಿಕ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಈ ಭೇಟಿಯಲ್ಲಿ ಯಾವುದೇ ಕುತೂಹಲವಿಲ್ಲ. ಬೆಂಗಳೂರು ಬಂದಾಗ ಸಹಜವಾಗಿ ಭೇಟಿಯಾಗುತ್ತೇನೆ. ಯಡಿಯೂರಪ್ಪನವರು ಹಿರಿಯರು ಹಾಗೂ ಸಮಾಜದ ಮುಖಂಡರಾಗಿದ್ದಾರೆ. ಅವರ ಅರ್ಶಿವಾದ ಪಡೆಯುವ ನಿಟ್ಟಿನಲ್ಲಿ ಭೇಟಿಯಾಗಿದ್ದೇನೆ‌ ಎಂದು ಹೇಳಿದರು.


Gadi Kannadiga

Leave a Reply