This is the title of the web page
This is the title of the web page

Please assign a menu to the primary menu location under menu

State

ವಿಶ್ವ ಮಹಿಳಾ ದಿನಾಚರಣೆ : ಸೈಕ್ಲೋಥಾನ್ ಜನಜಾಗೃತಿ ಜಾಥಕ್ಕೆ ಚಾಲನೆ


ಕೊಪ್ಪಳ ಮಾರ್ಚ್ 06 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಎನ್.ಸಿ.ಡಿ. ಕೋಶದ ಸಂಯುಕ್ತಾಶ್ರಯದಲ್ಲಿ ಹುಲಿಗಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ “ವಿಶ್ವ ಮಹಿಳಾ ದಿನಾಚರಣೆ” ಅಂಗವಾಗಿ “ಸೈಕ್ಲೋಥಾನ್” ಜನಜಾಗೃತಿ ಜಾಥಾ ಕಾರ್ಯಕ್ರಮ ಮಾರ್ಚ್ 06 ರಂದು ಹುಲಿಗಿ ಗ್ರಾಮದಲ್ಲಿ ನಡೆಯಿತು.
ಈ ವರ್ಷ “ಆರೋಗ್ಯವಂತ ಮಹಿಳೆಯರಿಂದ ಆರೋಗ್ಯಕರ ಭಾರತ” ಎಂಬ ಘೋಷವಾಕ್ಯದೊಂದಿಗೆ ಸಮುದಾಯದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ ನಂದಕುಮಾರ ಅವರು ಹಸಿರು ನಿಶಾನೆ ತೊರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಅವರು ಮಾತನಾಡಿ, ಪ್ರತಿ ವರ್ಷ ಮಾರ್ಚ್ 08 ರಂದು ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಗುತ್ತದೆ. ಸೈಕ್ಲೋಥಾನ್ ಜನಜಾಗೃತಿ ಕಾರ್ಯಕ್ರಮದ ಮೂಲಕ ಮಹಿಳೆಯರು ಆರೋಗ್ಯವಾಗಿರಲು ಅನುಸರಿಸಬೇಕಾದ ಕ್ರಮಗಳು ಹಾಗೂ ಸಲಹೆಗಳನ್ನು ನೀಡುವುದಾಗಿದೆ. ಮಹಿಳೆಯರು ದೈಹಿಕವಾಗಿ ಚಟುವಟಿಕೆಯಿಂದಿರಬೇಕು. ತಂಬಾಕು ಗುಟಕಾ ಸೇವನೆ ಮಾಡಬಾರದು. ವಿಷೇಶವಾಗಿ ಗರ್ಭಿಣಿಯರು ಮತ್ತು ಬಾಣಂತಿಯರು ತಂಬಾಕಿನಿಂದ ಮತ್ತು ಮಧ್ಯಪಾನ ಸೇವನೆಯಿಂದ ದೂರವಿರಬೇಕು. ಆರೋಗ್ಯಕರ ಪೌಷ್ಠಿಕ ಆಹಾರ ಸೇವನೆ ಮಾಡುವುದು, ಪ್ರತೀ ವರ್ಷಕ್ಕೊಮ್ಮೆ ವೈದ್ಯರಿಂದ ಆರೋಗ್ಯ ತಪಾಸಣೆಗೊಳಪಡಿಸಬೇಕು. ಭಾರತ ಹಳ್ಳಿಗಳ ದೇಶವಾಗಿದ್ದು, ಹಳ್ಳಿಗಳ ಅಭಿವೃದ್ಧಿಯಾದರೆ ನಮ್ಮ ದೇಶ ಅಭಿವೃದ್ಧಿಯಾದಂತೆ. ಆದ್ದರಿಂದ ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳು ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. 30 ವರ್ಷ ಮೇಲ್ಪಟ್ಟ ಮಹಿಳೆಯರು ಕಾಲ ಕಾಲಕ್ಕೆ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್, ಅಧಿಕ ಬೊಜ್ಜು ಇವುಗಳ ಬಗ್ಗೆ ಪರೀಕ್ಷಿಸಿಕೊಳ್ಳಬೇಕು. ಒಂದುವೇಳೆ ಯಾವುದೇ ಕಾಯಿಲೆ ಕಂಡುಬಂದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಲಭ್ಯವಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ ರಾಮಾಂಜನೇಯ ಅವರು, ಅಸಾಂಕ್ರಾಮಿಕ ರೋಗಗಳಿಂದ ಮಹಿಳೆಯರು ಯಾವರೀತಿ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ವಿವರವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಹುಲಿಗಿ ಪ್ರಾ.ಆ.ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ ಶಫಿಉಲ್ಲಾ, ಡಾ ಅರ್ಪಿತಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ಪೂಜಾರ, ಜಿಲ್ಲಾ ಸರ್ವೇಕ್ಷಣಾ ಘಟಕದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಲ್.ವ್ಹಿ ಸಜ್ಜನ, ಬಿ.ಹೆಚ್.ಇ.ಓ ಗಂಗಮ್ಮ, ಹಿ.ಪ್ರಾ.ಆ.ಸು ವಂದನಾ, ತಾಲೂಕಾ ಆಶಾ ಮೇಲ್ವಿಚಾರಕಿ ಸಂಧ್ಯಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಛೇರಿಯ ಡಿ.ಇ.ಓ. ಪ್ರಲ್ಹಾದ ಮತ್ತು ವಿವಿಧ ವೃಂದದ ಅಧಿಕಾರಿ/ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಹಾಗೂ ಶಾಲಾ ವಿಧ್ಯಾರ್ಥಿನಿಯರು ಭಾಗವಹಿಸಿ ಸೈಕಲ್ ಜಾಥಾ ಮೂಲಕ ಗ್ರಾಮದಲ್ಲಿ ಅರಿವು ಮೂಡಿಸಿದರು.


Gadi Kannadiga

Leave a Reply