This is the title of the web page
This is the title of the web page

Please assign a menu to the primary menu location under menu

Local News

77 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ


ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವಿವಿಧೆಡೆ ಶುಕ್ರವಾರ ಒಟ್ಟೂ 77 ಲಕ್ಷ ರೂ. ವೆಚ್ಚದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು.

ಸಾರಥಿ ನಗರ ಆಶ್ರಯ ಬಡಾವಣೆಯ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 28 ಲಕ್ಷ ರೂ,ಗಳು ಮಂಜೂರಾಗಿದ್ದು ಕಾಮಗಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆಯನ್ನು ನೀಡಿದರು.

ಮಾಸ್ತಿ ನಗರದಲ್ಲಿ ಚರಂಡಿ ನಿರ್ಮಾಣಕ್ಕಾಗಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ (SCPTSP) 27 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶುಕ್ರವಾರ ಕಾಮಗಾರಿಗಳಿಗೆ ಚಾಲನೆಯನ್ನುನೀಡಿದರು.

ನಂತರ, ಕುದ್ರೆಮನಿ ಗ್ರಾಮದ ನಾಯಿಕವಾಡಿ ಗಲ್ಲಿಯಲ್ಲಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ಅನುದಾನದ ವತಿಯಿಂದ 22 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಲಾಗಿದ್ದು, ಕಾಂಕ್ರೀಟ್ ರಸ್ತೆಯ ನಿರ್ಮಾಣ ಕಾಮಗಾರಿಗಳಿಗೆ ಸಹ ಲಕ್ಷ್ಮೀ ಹೆಬ್ಬಾಳಕರ್ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆಯಾ ಪ್ರದೇಶಗಳ ನಿವಾಸಿಗಳು, ಮುಸ್ತಾಕ್ ಮುಲ್ಲಾ, ಗ್ರಾಮ ಪಂಚಾಯತ್ ಸದಸ್ಯ ಸತೀಶ್, ಚೇತನಾ ಅಗಸ್ಗೆಕರ್, ಮನೋಜ ಹಿತ್ತಲಮನಿ, ವಿನಾಯಕ ಪಾಟೀಲ, ಅರುಣ ದೇವನ್ ಮುಂತಾದವರು ಉಪಸ್ಥಿತರಿದ್ದರು.


Gadi Kannadiga

Leave a Reply