This is the title of the web page
This is the title of the web page

Please assign a menu to the primary menu location under menu

Local News

ಕಿತ್ತೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂನ್.೨೧ ರಂದು ಪೂರ್ವ ಸಿದ್ಧತೆಗೆ ಶಾಸಕ ಮಹಾಂತೇಶ ದೊಡಗೌಡರ ಸೂಚನೆ


ಬೆಳಗಾವಿ,ಜೂ.೧೭ : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಮಂಗಳವಾರ (ಜೂ.೨೧) ಕಿತ್ತೂರು ಕೋಟೆ ಆವರಣದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಆಚರಿಸಲಾಗುವುದು ಎಂದು ಚನ್ನಮ್ಮನ ಕಿತ್ತೂರು ಶಾಸಕರಾದ ಮಹಾಂತೇಶ ದೊಡ್ಡಗೌಡ್ರ ಅವರು ತಿಳಿಸಿದರು. ಬೈಲಹೊಂಗಲ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ (ಜೂ.೧೭) ನಡೆದ ಸಭೆಯಲ್ಲಿ ಐತಿಹಾಸಿಕ ಸ್ಥಳವಾದ ಕಿತ್ತೂರಿನಲ್ಲಿ ಜೂನ್ ೨೧ ರಂದು ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವ ಸಿದ್ಧತೆಗಳ ಕುರಿತು ಅವರು ಮಾತನಾಡಿದರು.ಜೂನ್ ೨೧ ರಂದು ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಕೇಂದ್ರ ಸರಕಾರದ ಮಾರ್ಗಸೂಚಿಗಳು ಮತ್ತು ನಿರ್ದೇಶನದ ಪ್ರಕಾರ ಎಲ್ಲಾ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಮಾಡಿಕೊಳ್ಳಬೇಕು. ಐತಿಹಾಸಿಕ ಸ್ಥಳವಾದ ಕಿತ್ತೂರಿನಲ್ಲಿ ನಡೆಯುವ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಶ್ರಮಿಸಬೇಕು ಎಂದು ಶಾಸಕ ಮಹಾಂತೇಶ ದೊಡ್ಡಗೌಡ್ರ ಅವರು ಸೂಚನೆ ನೀಡಿದರು.
ಜಿಲ್ಲಾ ಆಯುಷ್ ಅಧಿಕಾರಿ ಶ್ರೀಕಾಂತ್ ಸುಣಧೋಳಿ ಅವರು ಯೋಗ ದಿನಾಚರಣೆಯ ಕಾರ್ಯಕ್ರಮದ ರೂಪರೇಷೆ ಹಾಗೂ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ಉಪ ವಿಭಾಗಾಧಿಕಾರಿಗಳಾದ ಶಶಿಧರ್ ಬಗಲಿ, ಕಿತ್ತೂರು ತಹಶೀಲ್ದಾರ ಸೋಮಲಿಂಗ ಹಾಲಗಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸದಾಶಿವ ಮಕ್ಕೋಜಿ, ತಾಲೂಕ ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳು, ತಾಲೂಕ ಮಟ್ಟದ ಇತರೆ ಅಧಿಕಾರಿಗಳು, ಆಯುಷ್ ಇಲಾಖೆಯ ವೈದ್ಯರು ಹಾಗೂ ಪತಂಜಲಿ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.


Gadi Kannadiga

Leave a Reply