ಬೆಳಗಾವಿ 12: ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆ ಮತ್ತು ಕನ್ನಡ ಸಾಂಸ್ಕೃತಿಕ ಭವನದ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದೊಂದಿಗೆ, ಬೆಳಗಾವಿ ಜಿಲ್ಲೆಯ ಶತಮಾನ ಕಂಡ ಸಾಹಿತಿಗಳಾದ, ದಿ. ಕೃಷ್ಣಮೂರ್ತಿ ಪುರಾಣಿಕ ಅವರ ಬದುಕು ಬರಹ ಕುರಿತು ತಿಂಗಳ ಉಪನ್ಯಾಸ ಕಾರ್ಯಕ್ರಮವನ್ನು ಶನಿವಾರ: ದಿನಾಂಕ 16 ರಂದು, ಮುಂಜಾನೆ:11:30 ಕ್ಕೆ, ನಗರದ ನೆಹರೂ ನಗರದಲ್ಲಿನ “ಕನ್ನಡ ಭವನ” ದಲ್ಲಿ ಜರುಗಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಬೆಳಗಾವಿ ಜಿಲಾಧ್ಯಕ್ಷರಾದ ಶ್ರೀಮತಿ ಮಂಗಲಾ ಮೆಟಗುಡ್ಡ ಅವರು ವಹಿಸಲಿದ್ದಾರೆ. ಬೆಳಗಾವಿಯ ಮ.ರ.ಸಂ.ಶಿಕ್ಷಣ ಮ.ವಿದ್ಯಾಲಯದ ಪ್ರಾಚಾರ್ಯರು ಡಾ. ನಿರ್ಮಲಾ ಬಟ್ಟಲ ಅವರು ದಿ.ಕೃಷ್ಣಮೂರ್ತಿ ಪುರಾಣಿಕ ಅವರ ಬದುಕು ಬರಹ ಕುರಿತು ಉಪನ್ಯಾಸವನ್ನು ನೀಡಲಿದ್ದಾರೆ.
ಬೆಳಗಾವಿಯ ಹಿರಿಯ ಸಾಹಿತಿಗಳು ಎಲ್.ಎಸ್.ಶಾಸ್ತಿçà ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಎಮ್ ವೈ ಮೆಣಸಿನಕಾಯಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ವೀರಭದ್ರಪ್ಪ ಅಂಗಡಿ ಅವರು ಸ್ವಾಗತಿಸಿ ಅತಿಥಿಗಳ ಪರಿಚಯವನ್ನು ಮಾಡಲಿದ್ದಾರೆ.
ಕೆ.ಎಲ್.ಇ.ಸಂಗೀತ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ನಾಡಗೀತೆಯನ್ನು ಪ್ರಸ್ತುತ ಪಡಿಸಲಿದ್ದಾರೆ. ಸುನೀಲ ಹಲವಾಯಿ ಅವರು ಕಾರ್ಯಕ್ರಮ ನಿರೂಪಸಲಿದ್ದಾರೆ. ಶಿವಾನಂದ ತಲ್ಲೂರ ವಂದಿಸಲಿದ್ದಾರೆ.
ಕ.ಸಾ.ಪ. ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕಾ ಅಧ್ಯಕ್ಷರುಗಳು, ಹಾಗೂ ಜಿಲ್ಲಾ ಕ.ಸಾ.ಪ. ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು, ಕ.ಸಾ.ಪ. ಸರ್ವ ಸದಸ್ಯರು, ಹಾಗೂ ಸಾಹಿತಿಗಳು, ಕಲಾವಿದರು ಮತ್ತು ಕನ್ನಡಪರ ಸಂಘಟನೆಗಳು, ಸಮಸ್ತ ಕನ್ನಡ ಮನಸ್ಸುಗಳು ಮತ್ತು ಕನ್ನಡ ಸಾಂಸ್ಕೃತಿಕ ಭವನದ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರು ಎಲ್ಲರೂ ಈ ಕಾರ್ಯಕ್ರಮಕ್ಕೆ ಆಗಮಿಸಿ ಶೋಭೆ ತರಬೇಕೆಂದು, ಕಸಾಪ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಗಲಾ ಮೆಟಗುಡ್ಡ ಪ್ರಕಟಣೆಯಲ್ಲಿ ಕೋರಿದ್ದಾರೆ.
Gadi Kannadiga > State > 16 ರಂದು ದಿ.ಕೃಷ್ಣಮೂರ್ತಿ ಪುರಾಣಿಕ ಅವರ ಬದುಕು ಬರಹ ಕುರಿತು ಉಪನ್ಯಾಸ
16 ರಂದು ದಿ.ಕೃಷ್ಣಮೂರ್ತಿ ಪುರಾಣಿಕ ಅವರ ಬದುಕು ಬರಹ ಕುರಿತು ಉಪನ್ಯಾಸ
Murugesh12/09/2023
posted on

More important news
ಬೆಳಗಾವಿಯ ಹುಡುಗರ ಸಾಹಸ ” ಪರ್ಯಾಯ”
18/09/2023