This is the title of the web page
This is the title of the web page

Please assign a menu to the primary menu location under menu

Local News

ಜೂ. ೩೦ ರಂದು ಕಾನೂನು ಅರಿವು ನೆರವು ಕಾರ್ಯಾಗಾರ


ಕೊಪ್ಪಳ, ಜೂ. ೨೯: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ದೇವದಾಸಿ ಪುನರ್‌ವಸತಿ ಯೋಜನೆ, ಹೊಂಗಿರಣ ಸಮಾಜ ಸೇವಾ ಸಂಸ್ಥೆ, ಸ್ನೇಹಾ ಮಹಿಳಾ ಸಂಸ್ಥೆ, ಅಭಿನವ ಶ್ರೀ ಸಿದ್ದೇಶ್ವರ ಅಭಿವೃದ್ಧಿ ಸಂಸ್ಥೆ, ಕರ್ನಾಟಕ ಲೈಂಗಿಕ ಕಾರ್ಮಿಕ ಯೂನಿಯನ್, ಸಂಗಮ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ದಮನಿತ ಮಹಿಳೆಯರು, ಮಾಜಿ ದೇವದಾಸಿ ಮಹಿಳೆಯರು ಹಾಗೂ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಅವರ ಹಕ್ಕುಗಳ ಬಗ್ಗೆ ಒಂದು ದಿನದ ಕಾನೂನು ಅರಿವು-ನೆರವು ಕಾರ್ಯಾಗಾರವನ್ನು ಜೂ.೩೦ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್.ರೇಖಾ ಕಾರ್ಯಕ್ರಮವನ್ನು ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ವಿಕಾಸ್ ಕಿಶೋರ್ ಸುರಳ್ಕರ್ ಅವರು ವಹಿಸಿಕೊಳ್ಳುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ತ್ವರಿತಗತಿ ವಿಶೇಷ (ಪೋಕ್ಸೋ) ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಎಸ್.ಎಂ.ಜಾಲವಾದಿ, ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್, ಸಿಜೆಎಂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಲ್.ಜೆ.ಭವಾನಿ, ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಹರೀಶ್ ಕುಮಾರ ಎಂ., ಜೆಎಂಎಫ್‌ಸಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಆದಿತ್ಯಾ ಕುಮಾರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ.ಕಣವಿ, ಕಲಬುರ್ಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ, ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ವಿ.ಎಮ್.ಭೂಸನೂರಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅಲಕನಂದಾ ಡಿ. ಮಳಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಜಿಲ್ಲಾ ಏಡ್ಸ್ ತಡೆಗಟ್ಟುವುಕೆ ಮತ್ತು ನಿಯಂತ್ರಣ ಘಟಕದ ಡಾ.ಶಶಿಧರ ಎ., ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಪ್ರೋಗ್ರಾಂ ಆಫೀಸರ್ ಸಂತೋಷ್ ಕುಮಾರ ಮುದಗಲ್, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರಾದ ಸುಧಾ ಮಂಜುನಾಥ ಚಿದ್ರಿ, ದೇವದಾಸಿ ಪುನರ್ವಸತಿ ಯೋಜನೆಯ ಯೋಜನಾಧಿಕಾರಿ ಗೋಪಾಲ್ ನಾಯಕ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಸಮಾಜಿಕ ಹಾಗೂ ರಾಜಕೀಯ ಹಕ್ಕುಗಳ ಹೋರಾಟಗಾರ್ತಿ ಮತ್ತು ನಾ ನಾಯಕಿ ರಾಜ್ಯ ಸಂಯೋಜಕಿ ಡಾ. ಅಕ್ಕಯ್ ಪದ್ಮಶಾಲಿ, ಕರುಣೆಗೊಂದು ಸವಾಲ್ ನಾಟಕದ ನಿರ್ದೇಶಕ ಡಾ.ಬೇಲೂರು ರಘುನಂದನ, ನಟಿ ನಯನ ಸೂಡ, ರಾಜಗುರು, ಅಭಿನವ ಶ್ರೀ ಸಿದ್ದೇಶ್ವರ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಆನಂದ ಹಳ್ಳಿಗುಡಿ, ಬೆಂಗಳೂರಿನ ಕರ್ನಾಟಕ ಲೈಂಗಿಕ ಕಾರ್ಮಿಕ ಯೂನಿಯನ್, ಸಂಗಮ ಸಂಸ್ಥೆಯ ಪ್ರೋಜೆಕ್ಟ್ ಆಫೀಸರ್ ನಿಶಾ ಗೂಳೂರು ಅವರು ಪಾಲ್ಗೊಳ್ಳುವರು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.


Gadi Kannadiga

Leave a Reply