ಬೆಳಗಾವಿ: ವೀರಶೈವ ಲಿಂಗಾಯತ ಸಮುದಾಯದ ಎಲ್ಲ ನೂತನ ಶಾಸಕರು ಮತ್ತು ಸಚಿವರಿಗೆ ಜುಲೈ 5ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸನ್ಮಾನಿಸಲಾಗುತ್ತಿದೆ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಕಿತ್ತೂರು ಕರ್ನಾಟಕ ಪ್ರದೇಶ ಅಧ್ಯಕ್ಷರಾದ ಉಮೇಶ್ ಬಾಳಿ ತಿಳಿಸಿದರು.ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರೆಂದು ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ಜಗದ್ಗುರು ಡಾ. ವೀರ ಸೋಮೇಶ್ವರ ರಾಜ ದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದರ ಸಾನಿಧ್ಯದಲ್ಲಿ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ್ ಕಂಕಣವಾಡಿ ಅವರ ನೇತೃತ್ವದಲ್ಲಿ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಕಾಂಗ್ರೆಸ್ ಪಕ್ಷದ 39 ಬಿಜೆಪಿಯ 18 ಮತ್ತು ಜೆಡಿಎಸ್ ನ ಇಬ್ಬರು ಶಾಸಕರು ಆಯ್ಕೆಯಾಗಿದ್ದು ಈ ಎಲ್ಲರನ್ನೂ ಪಕ್ಷಾತೀತವಾಗಿ ವೇದಿಕೆಯ ಪರವಾಗಿ ಸತ್ಕರಿಸಲಾಗುತ್ತಿದೆ. ಸಮಾರಂಭದಲ್ಲಿ ರಾಜ್ಯದ ವಿವಿಧ ಮಠಗಳ ಸ್ವಾಮೀಜಿಗಳು ಉದ್ಯಮಿಗಳು ಗಣ್ಯರು ಭಾಗವಹಿಸಲಿದ್ದಾರೆ ಬುಧುವಾರ ಜುಲೈ 5ರಂದು ಸಂಜೆ 5:30 ಗಂಟೆಗೆ ಬೆಂಗಳೂರಿನ ಚಾಮರಾಜನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಬಂಧುಗಳು ಭಾಗವಹಿಸುವಂತೆ ಅವರು ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಸಂಘಟನೆ ವೇದಿಕೆಯ ವೈದ್ಯರ ಘಟಕದ ಅಧ್ಯಕ್ಷ ಡಾ. ಸುಭಾಷ್ ಪಾಟೀಲ್ ಇತರ ಪದಾಧಿಕಾರಿಗಳಾದ ಡಾ.ಉಮೇಶ್ ವಾಲಿ ಡಾ. ಶಿವಾನಂದ ಕುಸ್ಲಾಪುರ್ ನಿಖಿಲ್ ಅಂಗಡಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಶೀತಲ ಮಠಪತಿ , ಜಿಲ್ಲಾಧ್ಯಕ್ಷೆ ಶ್ರೀಮತಿ ಶಿಲ್ಪಾ ಗೋದಿ ಗೌಡರ್ , ಮೀನಾಕ್ಷಿ ಪಾಟೀಲ್, ಮುಂತಾದವರು ಉಪಸ್ಥಿತರಿದ್ದರು.
Gadi Kannadiga > State > ಲಿಂಗಾಯಿತ ಶಾಸಕ ಸಚಿವರಿಗೆ 5 ರಂದು ಬೆಂಗಳೂರಲ್ಲಿ ಸನ್ಮಾನ
ಲಿಂಗಾಯಿತ ಶಾಸಕ ಸಚಿವರಿಗೆ 5 ರಂದು ಬೆಂಗಳೂರಲ್ಲಿ ಸನ್ಮಾನ
Murugesh28/06/2023
posted on
