ಬೆಳಗಾವಿ,ಅ.೨೦: ಅಕ್ಟೋಬರ್ ೨೬ ರಂದು ಸಂಜೆ ೫ ಗಂಟೆಯಿಂದ ಅಕ್ಟೋಬರ್ ೨೮ ರಂದು ಮಧ್ಯರಾತ್ರಿ ೧೨ ಗಂಟೆಯವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ ಸಾರ್ವತ್ರಿಕ ಉಪ ಚುನಾವಣೆ-೨೦೨೨ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ-೨೦೨೨ ನಿಮಿತ್ಯ ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ನೀತಿ ಸಂಹಿತೆಯು ಜಾರಿಯಲ್ಲಿರುವ ಪ್ರದೇಶಗಳಲ್ಲಿ ಮಾತ್ರ ಮದ್ಯ ಮಾರಾಟವನ್ನು ನಿಷೇಧಿಸಿ ಮದ್ಯ/ ಬಾರ್ ಅಂಗಡಿಗಳನ್ನು ಬಂದ್ ಇಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು ಅಧಿಭೋಗದಾರರು ಮತ್ತು ಸಂದರ್ಭಾನುಸಾಋ ವ್ಯವಸ್ಥಾಪಕರು ಮುಚ್ಚತಕ್ಕದ್ದು ಹಾಗೂ ಮೊಹರು ಮಾಡಿ ಅದರ ಕೀಯನ್ನು ಅಧಿಕಾರವುಳ್ಳ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರಿಗೆ ಅಥವ ಜಿಲ್ಲಾಧಿಕಾರಿಗಳಿಗೆ ಒಪ್ಪಿಸತಕ್ಕದ್ದು. ನಿಯಮ ಉಲ್ಲಂಘಿಸಿದರೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ: ಅ.೨೬, ೨೮ ರಂದು ಮದ್ಯ ಮಾರಾಟ ನಿಷೇಧ
More important news
ವ್ಯಕ್ತಿ ನಾಪತ್ತೆ
30/01/2023
ನೇಕಾರರಿಗೆ ವಿಶೇಷ ಪ್ಯಾಕೇಜ್
30/01/2023
ಫ.೧ ರಂದು ಮಡಿವಾಳ ಮಾಚಿದೇವ ಜಯಂತಿ ಉತ್ಸವ
27/01/2023
ಜ.೨೮ ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ
27/01/2023