ಬೆಳಗಾವಿ, ಏ.೧೦ : ಜಿಲ್ಲೆಯ ಕಿತ್ತೂರ ತಾಲೂಕಿನ ಕಿತ್ತೂರ ಪಟ್ಟಣ ಪಂಚಾಯತಿ ಸಭಾಭವನದಲ್ಲಿ ಏ.೧೨, ೨೦೨೩ ರಂದು ಬೆಳ್ಳಿಗ್ಗೆ ೧೦.೩೦ ರಿಂದ ೧೨ ಗಂಟೆಯವರೆಗೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಕಿತ್ತೂರ ತಾಲೂಕಿನ ಎಲ್ಲ ತಾಲೂಕಾ ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ.
ಸರ್ಕಾರಿ ಕಛೇರಿಯಲ್ಲಿಯ ಅಧಿಕಾರಿಗಳು ಸಾರ್ವಜನಿಕರ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದಲ್ಲಿ, ಸ್ಥಳದಲ್ಲಿಯೇ ಅಧಿಕಾರಿಗಳಿಂದ ಪರಿಹರಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಇಚ್ಛಿಸುವವರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಹಾಜರಿರಲು ತಿಳಿಸಲಾಗಿದೆ.
ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟಲ್ಲಿ, ಒತ್ತಾಯಿಸಿದಲ್ಲಿ ಅಥವಾ ಸರ್ಕಾರಿ ಅಧಿಕಾರಿಯ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಮಾಹಿತಿ ಇದ್ದಲ್ಲಿ, ಲೋಕಾಯುಕ್ತ ಅಧಿಕಾರಿಗಳೊಂದಿಗೆ ನೇರವಾಗಿ/ಗುಪ್ತವಾಗಿ ಮಾಹಿತಿ ನೀಡಿ, ಸದರಿ ಸಭೆಯ ಸದುಪಯೋಗ ಪಡಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗಾಗಿ ಕಛೇರಿ ದೂರವಾಣಿ ಸಂಖ್ಯೆ ೦೮೩೧-೨೯೫೦೭೫೬, ೦೮೩೧-೨೪೨೧೯೨೨ ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ಲೋಕಾಯುಕ್ತ ಜನ ಸಂಪರ್ಕ ಸಭೆ ಏ.೧೨ ರಂದು
ಲೋಕಾಯುಕ್ತ ಜನ ಸಂಪರ್ಕ ಸಭೆ ಏ.೧೨ ರಂದು
Suresh10/04/2023
posted on