This is the title of the web page
This is the title of the web page

Please assign a menu to the primary menu location under menu

Local News

ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ: ಸೆ.೨೩ ರಿಂದ


ಬೆಳಗಾವಿ,ಸೆ.೨೦: ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಿಗೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಸೆ. ೨೩, ೨೬, ೨೭ ಹಾಗೂ ೨೮ ರಂದು ಭೇಟಿ ನೀಡಲಿದ್ದು ಕಾನೂನು ನಿಯಮ ಮೀರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ. ಅಲ್ಲದೇ ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಸದರಿ ಸರಕಾರಿ ಕೆಲಸ ನಿರ್ವಹಿಸಲು ಹಣ/ವಸ್ತು/ಲಂಚ ಬೇಡಿಕೆ ಇಟ್ಟಲ್ಲಿ ಸಾರ್ವಜನಿಕರು ತಮ್ಮ ದೂರುಗಳನ್ನು ನೇರವಾಗಿ ಸಲ್ಲಿಸಬಹುದಾಗಿದೆ.
ಸೆ.೨೩ಕ್ಕೆ ಬೆಳಗಾವಿ, ರಾಯಬಾಗ, ಅಥಣಿ, ಸವದತ್ತಿ ತಾಲೂಕುಗಳ ಪ್ರವಾಸಿ ಮಂದಿರದಲ್ಲಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸೆ.೨೬ಕ್ಕೆ ಖಾನಾಪೂರ, ಬೈಲಹೊಂಗಲ, ಚಿಕ್ಕೋಡಿ, ಹುಕ್ಕೇರಿ ತಾಲೂಕುಗಳ ಪ್ರವಾಸಿ ಮಂದಿರದಲ್ಲಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸೆ.೨೭ಕ್ಕೆ ಗೋಕಾಕ ಹಾಗೂ ೨೮ಕ್ಕೆ ರಾಮದುರ್ಗ ತಾಲೂಕುಗಳ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಹೆಚ್ಚಿನ ವಿವರಗಳಿಗಾಗಿ ಈ ಕಛೇರಿ ದೂರವಾಣಿ ಸಂಖ್ಯೆಗಳಾದ (೧) ೦೮೩೧-೨೯೫೦೭೫೬ ಮತ್ತು (೨) ೦೮೩೧-೨೪೨೧೯೨೨ ಸಂಪರ್ಕಿಸಬಹುದಾಗಿದೆ ಎಂದು ಬೆಳಗಾವಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply