This is the title of the web page
This is the title of the web page

Please assign a menu to the primary menu location under menu

Local News

ಎಂ.ಎಸ್ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಕಾಯ್ದೆ ೨೦೧೩ರ ಅಂಶಗಳ ಜಿಲ್ಲಾ ಮಟ್ಟದ ತರಬೇತಿ ಪುನರ್ವಸತಿ ಕಲ್ಪಿಸಿ: ಎಂ. ಶಿವಣ್ಣ ಕೋಟೆ ಸೂಚನೆ


ಬೆಳಗಾವಿ, ಆ.೨೫ : ಮ್ಯಾನ್ಯುವಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ ೨೦೧೩ ರಂತೆ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಮತ್ತು ಅವರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಮತ್ತು ಪುನರ್ವಸತಿ ಕಲ್ಪಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ. ಶಿವಣ್ಣ ಕೋಟೆ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ (ಆ.೨೫) ನಡೆದ ಮ್ಯಾನ್ಯುವಲ್ ಸ್ಕ್ಯಾವೆಂಜರ್ ನಿಯೋಜನೆ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ ೨೦೧೩ರ ಕುರಿತ ತರಬೇತಿಯಲ್ಲಿ ಅವರು ಮಾತನಾಡಿದರು.
ನೈರ್ಮಲ್ಯರಹಿತ ಶೌಚಾಲಯಗಳ ಮತ್ತು ಮೊಲಹೊರುವ ಜಾಡಮಾಲಿಯ ನಿಯೋಜನೆ ಹಾಗೂ ಆ ವೃತ್ತಿಯಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಪುರಸಭೆಗಳು ನಗರ ಪ್ರದೇಶಗಳಿರುವ ಅಂತಹ ಕೆಲಸ ಮಾಡುತ್ತಿರುವ ಮಾನ್ಯುಯಲ್ ಸ್ಕ್ಯಾವೆಂಜರ್ ಅವರನ್ನು ಮತ್ತು ಅವರ ಅವಲಂಬಿತರನ್ನು ಗುರುತಿಸಿ ಪುನರ್ವಸತಿ ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.
ಸಫಾಯಿ ಕರ್ಮಚಾರಿಗಳಿಗಾಗಿ ಸರ್ಕಾರದ ವಿವಿಧ ಇಲಾಖೆಗಳಿಂದ ನೀಡುತ್ತಿರುವ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ಹಾಗೂ ನಿಗದಿತ ಅವಧಿಯೊಳಗೆ ವಿವಿಧ ಇಲಾಖೆಗಳ ಜೊತೆ ಸಮನ್ವಯ ಸಾಧಿಸಿ ಯೋಜನೆಗಳು ಅನುಷ್ಠಾನಗೊಳ್ಳುವಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗುತ್ತಿಗೆ ಪೌರ ಕಾರ್ಮಿಕರಿಗೆ ಪರಿಷ್ಕೃತ ವೇತನ ನೀಡುವುದರ ಜೊತೆಗೆ ಇಎ??? ಮತ್ತು ಪಿಎಫ್ ಮೊತ್ತವನ್ನು ಕಡಿತಗೊಳಿಸಿದ ವಿವರವನ್ನು ಅವರ ವೈಯಕ್ತಿಕ ಖಾತೆಗೆ ಜಮೆ ಮಾಡಬೇಕು.
ಸುರಕ್ಷತಾ ಪರಿಕರಗಳು, ಮಾಸ್ಟರ್ ಹೆಲ್ತ್ ಚೆಕ್ ಅಪ್, ವೃತ್ತಿ ಸಂಬಂಧಿತ ಕಾಯಿಲೆಗಳಿಂದ ನರಳುತ್ತಿದ್ದರೆ, ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಉಚಿತವಾಗಿ ನಿಯಮಾನುಸಾರ ಚಿಕಿತ್ಸೆ ಹಾಗೂ ಪೌರಕಾರ್ಮಿಕರ ಮಕ್ಕಳು ಅರ್ಧದಲ್ಲಿ ವಿದ್ಯಾಭ್ಯಾಸವನ್ನು ಕುಂಠಿತಗೊಳಿಸಿದ್ದಲ್ಲಿ ಅಂತವರನ್ನು ಗುರುತಿಸಿ ಶಿಕ್ಷಣ ಇಲಾಖೆಯ ಮೂಲಕ ಮರಳಿ ಶಾಲೆಗೆ ಕಳುಹಿಸಬೇಕು ಎಂದು ಸೂಚಿಸಿದರು.
ಶಿಕ್ಷಣ ಸೌಲಭ್ಯ ನೀಡಲು ಸೂಚನೆ: ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪುನರ್ವಸತಿ, ಪೌರಕಾರ್ಮಿಕರು ವಾಸಿಸುವ ಕಾಲೋನಿಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು. ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಕರ್ನಾಟಕದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆಗಳಲ್ಲಿ ಪ್ರವೇಶ, ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ, ವಸತಿ ನಿಲಯಗಳಲ್ಲಿ, ವಿದ್ಯಾರ್ಥಿ ವೇತನ ಹಾಗೂ ಇತರೆ ಶೈಕ್ಷಣಿಕ ಪ್ರೋತ್ಸಾಹ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ನಿಯಮ ಉಲ್ಲಂಘನೆಗೆ ಕಾನೂನು ಕ್ರಮ: ಯಾವುದೇ ವ್ಯಕ್ತಿ ಅಥವಾ ಸ್ಥಳೀಯ ಸಂಸ್ಥೆ, ಏಜೆನ್ಸಿ ಈ ಅಧಿನಿಯಮ ಜಾರಿಗೆ ಬಂದ ೧ ವರ್ಷದ ನಂತರದಲ್ಲಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಕೆಲಸಕ್ಕೆ ನೇಮಿಸಬಾರದು. ಅಧಿನಿಯಮ ಉಲ್ಲಂಘನೆ ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು. ಮ್ಯಾನ್ಯುವಲ್ ಸ್ಕ್ಯಾವೆಂಜರ್ ಪದ್ಧತಿ ನಿರ್ಮೂಲನೆ ಮಾಡುವ ಬಗ್ಗೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯ ಮಾಡಿಕೊಂಡು ಅರಿವು ಮತ್ತು ಜಾಗೃತಿ ಶಿಬಿರಗಳನ್ನು ಆಯೋಜಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ. ಶಿವಣ್ಣ ಕೋಟೆ ಅವರು ತಿಳಿಸಿದರು. ಈ ವೇಳೆ ತರಬೇತಿ ನೀಡಿದ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರ ಆಪ್ತ ಸಹಾಯಕ ರಾಘವೇಂದ್ರ ಅವರು ಮ್ಯಾನುವಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಕಾಯ್ದೆಯ ೧೯, ಎ ಪ್ರಕಾರ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಕೆಲಸಕ್ಕೆ ನಿಯೋಜಿಸಿದಂತೆ ಕ್ರಮ ವಹಿಸಬೇಕು. ೧೯, ಬಿ ಪ್ರಕಾರ ಅನೈರ್ಮಲ್ಯ ಶೌಚಾಲಯಗಳನ್ನು ತೆರೆಗೆಗೊಳಿಸಲು ಮತ್ತು ನಿರ್ಮಾಣ ಮಾಡದಂತೆ ಜಾಗೃತಿ ವಹಿಸಬೇಕು ಎಂದು ಹೇಳಿದರು.೧೯, ಸಿ ಆರ್. ಡಿ ಮತ್ತು ೧೬ ನೇ ಪ್ರಕಾರ ಗುರುತಿಸಲ್ಪಟ್ಟ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಗಳಿಗೆ ಪುನರ್ವಸತಿ ಕಲ್ಪಿಸಬೇಕು. ೧೯, ಡಿ ಪ್ರಕಾರ ಕಲಂ ೫, ೬ ಮತ್ತು ೭ನೇ ಕಾಯ್ದೆಗಳು ಉಲ್ಲಂಘನೆಯಲ್ಲಿ ಉಪಬಂಧಗಳ ಮೇರೆಗೆ ವಿಚಾರಣೆ ಮಾಡಿ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತರಬೇತಿ ನೀಡಿದರು.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ರಾಜ್ಯಮಟ್ಟದ ಕಾರ್ಯದರ್ಶಿಗಳಾದ ಚಂದ್ರಕಲಾ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಸಫಾಯಿ ಕರ್ಮಚಾರಿ ನಿಗಮದ ಅಧ್ಯಕ್ಷರಾದ ವೆಂಕಟೇಶ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ದರ್ಶನ್ ಹೆಚ್.ವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ, ಅಪರ ಜಿಲ್ಲಾಧಿಕಾರಿ ಅಶೋಕ ಗುಡಗುಂಟಿ, ಡಿಸಿಪಿ ರವೀಂದ್ರ ಗಡಾದಿ, ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿ, ಯೋಜನಾ ಕೋಶದ ಯೋಜನಾ ನಿರ್ದೇಶಕರಾದ ಈಶ್ವರ ಉಳ್ಳಾಗಡ್ಡಿ, ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಉಮಾ ಸಾಲಿಗೌಡರ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖಾಧಿಕಾರಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು.


Gadi Kannadiga

Leave a Reply