This is the title of the web page
This is the title of the web page

Please assign a menu to the primary menu location under menu

State

ಚುನಾವಣಾ ಅಕ್ರಮ ತಡೆಗೆ ಸಿ-ವಿಜಿಲ್ ಆ್ಯಪ್ ಬಳಸಿ:ಎಂ.ಸುಂದರೇಶ ಬಾಬು


ಕೊಪ್ಪಳ ಏಪ್ರಿಲ್ ೧೮ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ರ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ ಭಾರತ ಚುನಾವಣಾ ಆಯೋಗವು ಸಿ-ವಿಜೀಲ್ ಆ್ಯಪ್ ಬಿಡುಗಡೆ ಮಾಡಿದೆ. ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ನೀಡುವ ಆಮಿಷಗಳ ಮೇಲೆ ಕಣ್ಣಿಡಲು ಸಿ-ವಿಜಿಲ್ ಆ್ಯಪ್ ಸಹಕಾರಿಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ತಿಳಿಸಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ವಿವಿಧ ಪಕ್ಷಗಳು ಮತಗಳನ್ನು ಸೆಳೆಯಲು ಮತದಾರರಿಗೆ ಹಣ ಹಾಗೂ ಇತರೆ ಆಸೆ, ಆಮೀಷ ತೋರಿಸುವರು. ಸಿವಿಜಿಲ್ ಮೊಬೈಲ್ ಅಪ್ಲಿಕೇಷನ್ ಮೂಲಕ ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಅಕ್ರಮವನ್ನು ತಮ್ಮ ಮೊಬೈಲ್‌ಗಳ ಮೂಲಕ ನೇರವಾಗಿ ಆಯೋಗಕ್ಕೆ ಮಾಹಿತಿ ನೀಡಬಹುದು. ದೂರುದಾರರ ಹೆಸರು, ವಿಳಾಸವನ್ನು ಗೌಪ್ಯವಾಗಿ ಇಡುವ ಭರವಸೆಯನ್ನು ಕೂಡ ಆಯೋಗ ನೀಡಿದೆ.
ಚುನಾವಣಾ ಸಮಯದಲ್ಲಿ ಮತದಾರರು ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯಲ್ಲಿ ಆಮಿಷ ನೀಡಬಹುದಾದ ಹಣ ವಿತರಣೆ, ಉಡುಗೊರೆಗಳು, ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿ ಇಲ್ಲದ ಪೋಸ್ಟರ್ ಮತ್ತು ಬ್ಯಾನರ್‌ಗಳು, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ, ಆಸ್ತಿ ವಿರೂಪ, ಧಾರ್ಮಿಕ ಅಥವಾ ಕೋಮು ಭಾಷಣಗಳು, ಸಂದೇಶಗಳು, ಮತಗಟ್ಟೆಯ ೨೦೦ ಮೀಟರ್ ಪ್ರದೇಶದಲ್ಲಿ ಪ್ರಚಾರ, ನಿಷೇಧದ ಅವಧಿಯಲ್ಲಿ ಪ್ರಚಾರ, ಮತದಾನದ ದಿನದಂದು ವಾಹನಗಳಲ್ಲಿ ಮತದಾರರ ಸಾಗಣೆ ಮುಂತಾದ ಯಾವುದೇ ರೀತಿಯ ಪ್ರಲೋಭನೆ, ಬೆದರಿಕೆ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಸಾರ್ವಜನಿಕರೇ ನೇರವಾಗಿ ಸಿ-ವಿಜಿಲ್ ಆ್ಯಪ್‌ನಲ್ಲಿ ದೂರು ದಾಖಲಿಸಬಹುದಾಗಿದೆ.
ಸ್ಮಾರ್ಟ್ ಫೋನ್‌ನ ಗೂಗಲ್ ಪ್ಲೇ ನಲ್ಲಿ ಸಿ-ವಿಜಿಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಅತ್ಯಂತ ಸುಲಭವಾಗಿ ಇದನ್ನು ಬಳಸಬಹುದಾಗಿದೆ. ಅಕ್ರಮದ ಕುರಿತಾದ ಫೋಟೋ ಅಥವಾ ವಿಡಿಯೋ ಗಳನ್ನು ಅಪ್‌ಲೋಡ್ ಮಾಡಿ ದೂರು ನೀಡಬಹುದು. ಆ್ಯಪ್ ತಮ್ಮ ಸ್ವವಿವರ ನೀಡಿಯಾದರೂ, ಅಥವಾ ನೀಡದೆಯೂ ದೂರು ನೀಡಬಹುದು. ದೂರು ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಡಲಾಗುವುದು. ಸಿ-ವಿಜಿಲ್ಲನಲ್ಲಿ ದಾಖಲಾಗುವ ದೂರುಗಳನ್ನು ನಿರ್ವಹಿಸಲು ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಸಿ-ವಿಜಿಲ್ ಆ್ಯಪ್ ನಿರ್ವಹಣಾ ಸಿಬ್ಬಂದಿ, ಮತದಾನ ಮುಕ್ತಾಯವಾಗುವವರೆಗೂ ಪಾಳಿಯಲ್ಲಿ ದಿನದ ೨೪ ಗಂಟೆ ಕಾರ್ಯ ನಿರ್ವಹಿಸುವರು. ದೂರು ಬಂದ ಕೂಡಲೇ ಅವುಗಳನ್ನು ಪರಿಶೀಲಿಸಿ, ಆ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಾಪ್ತಿಯ ಫ್ಲೆöÊಯಿಂಗ್ ಸ್ವಾಡ್ ತಂಡಕ್ಕೆ ಪ್ರಕರಣದ ಸಂಪೂರ್ಣ ವಿವರ ಹಾಗೂ ಮಾಹಿತಿಯನ್ನು ರವಾನಿಸಲಾಗುತ್ತದೆ. ಈ ಮಾಹಿತಿ ಆಧಾರದಲ್ಲಿ ತಕ್ಷಣ ಸ್ಥಳಕ್ಕೆ ಭೇಟಿ ನೀಡುವ ಫೈಯಿಂಗ್ ಸ್ಕಾಡ್ ಸಿಬ್ಬಂದಿ ದೂರು ಕುರಿತಂತೆ ಅಗತ್ಯ ಕ್ರಮಕೈಗೊಂಡು ಇತ್ಯರ್ಥಪಡಿಸುವರು. ಸಾರ್ವಜನಿಕರು ಸಿ-ವಿಜಿಲ್ ಮಾತ್ರವಲ್ಲದೇ ಉಚಿತ ಸಹಾಯವಾಣಿ ೧೯೫೦ ಮೂಲಕವೂ ಚುನಾವಣಾ ಅಕ್ರಮಗಳ ಕುರಿತು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


Leave a Reply