This is the title of the web page
This is the title of the web page

Please assign a menu to the primary menu location under menu

Local News

ಅಥಣಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇನೆ: ಮಹೇಶ್ ಕುಮಟಳ್ಳಿ


ಅಥಣಿ ಮತಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇನೆ ಎಂದು ಕಕಮರಿ ಗ್ರಾಮದಲ್ಲಿ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು. ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ಅಮ್ಮಾಜೇಶ್ವರಿ ದೇವಸ್ಥಾನದ ಸಮುದಾಯ ಭವನ ಕಾಮಗಾರಿ ಭೂಮಿ ಪೂಜೆಯನ್ನು ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಮಹೇಶ್ ಕುಮಟಳ್ಳಿ ಅವರು ಕಕಮರಿ ಜನರ ಬಹುದಿನಗಳ ಬೇಡಿಕೆಯಾಗಿದ್ದ ಕಕಮರಿ ಅಂದರ್ ಕೋಡಿ ರಸ್ತೆಯನ್ನು ಸುಮಾರು ಒಂದು ಕೋಟಿ 35ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು.

ಇನ್ನು ಮುಂಬರುವ ಒಂದು ತಿಂಗಳಲ್ಲಿ ಕಕಮರಿ ಮತ್ತಿಕೊಡಿ ರಸ್ತೆಯ ಕಾಮಗಾರಿಯನ್ನು 1ಕೋಟಿ 25ಲಕ್ಷಗಳ ವೆಚ್ಚದಲ್ಲಿ ಪ್ರಾರಂಭ ಮಾಡುವ ಕಾರ್ಯ ಮಾಡುತ್ತೇನೆಂದು ತಿಳಿಸಿದರು.

ಕಕಮರಿಯ ಅಮ್ಮಾಜೇಶ್ವರಿ ದೆವಸ್ದಾನದ ಭವನದ ಕಾಮಗಾರಿಯನ್ನು ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 20ಲಕ್ಷಗಳ ಅನುದಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಕಕಮರಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಿದ ಸಂದರ್ಭದಲ್ಲಿ ಊರಿನ ಮುಖಂಡರು ಗ್ರಾಮಸ್ಥರು ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.


Gadi Kannadiga

Leave a Reply