This is the title of the web page
This is the title of the web page

Please assign a menu to the primary menu location under menu

Local News

ಜಿಲ್ಲಾ ಮಟ್ಟದ “ಯುವಜನೋತ್ಸವದ” ಅಂಗವಾಗಿ ವಿದ್ಯಾರ್ಥಿಗಳಿಗೆ ಮ್ಯಾರಥಾನ್ ಸ್ಪರ್ಧೆ


ಬೆಳಗಾವಿ, ಆ.೩೦ : “ಯುವಜನೋತ್ಸವದ” ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಹೆಚ್.ಐ.ವಿ/ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಹೆಚ್‌ಐವಿ ಮತ್ತು ಏಡ್ಸ್ (ತಡೆ) ಕಾಯ್ದೆ ೨೦೧೭, ನ್ಯಾಕೋ ಏಡ್ಸ್ ಆ್ಯಪ್, ಉಚಿತ ರಾಷ್ಟ್ರೀಯ ಸಹಾಯವಾಣಿ ೧೦೯೭, ಎಸ್‌ಟಿಐ, ಇತ್ಯಾದಿ ಬಗ್ಗೆ ವಿದ್ಯಾರ್ಥಿ/ವಿದ್ಯಾರ್ಥಿನಿಯರಲ್ಲಿ ಅರಿವು ಮೂಡಿಸುವ ಸಲುವಾಗಿ ೫ ಕಿ.ಮೀ ಮ್ಯಾರಥಾನ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಮ್ಯಾರಥಾನ್ ಸ್ಪರ್ಧೆಯು ಸಪ್ಟೆಂಬರ್ ೨, ೨೦೨೩ ರಂದು ಬೆಳಿಗ್ಗೆ ೭ ಗಂಟೆಗೆ ಜಿಲ್ಲಾ ಕ್ರೀಡಾಂಗಣದಿಂದ ಪ್ರಾರಂಭವಾಗಿ ಕೊಲ್ಲಾಪೂರ ವೃತ್ತದ ಮಾರ್ಗವಾಗಿ ಚನ್ನಮ್ಮಾ ವೃತ್ತ ತಲುಪಿ, ಮರಳಿ ಅದೇ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣ ತಲುಪುವದು.
ಸ್ಪರ್ಧೆಗಳ ವಿವರ :
೧೭-೨೫ ವರ್ಷದ ಕಾಲೇಜು ವಿದ್ಯಾರ್ಥಿಗಳು ಮಾತ್ರ ೫ ಕಿ.ಮೀ ಮ್ಯಾರಥಾನ್‌ನಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಬಹುದು. (ಕಾಲೇಜು ವಿದ್ಯಾರ್ಥಿಗಳು/ ರೆಡ್ ರಿಬ್ಬನ್ ಕ್ಲಬ್ ಸದಸ್ಯರುಗಳು)
ಮೊದಲು ಕಾಲೇಜು ಮಟ್ಟದಲ್ಲಿ ಮ್ಯಾರಥಾನ್ ಸ್ಪರ್ಧೆಯನ್ನು ಏರ್ಪಡಿಸಿ ನಂತರ ಅಲ್ಲಿ ವಿಜೇತರಾದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಆಯ್ಕೆಯಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗುವದು. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರನ್ನು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗುವದು.
ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಕಾಲೇಜು ಗುರುತಿನ ಚೀಟಿ, ಆಧಾರ ಕಾರ್ಡ, ಕಾಲೇಜು ಪ್ರಾಂಶುಪಾಲರ ಅನುಮತಿ ಪತ್ರದೊಂದಿಗೆ ಹಾಜರಾಗಬೇಕು.
ವಿಜೇತರಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರಮಾಣ ಪತ್ರ ನೀಡಲಾಗುವದು ಹಾಗೂ ನಗದು ಬಹುಮಾನಕ್ಕಾಗಿ ಬ್ಯಾಂಕ್ ಖಾತೆಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಸಂದಾಯ ಮಾಡುವದು.
ಸ್ಪರ್ದೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮೊದಲನೇಯ ಬಹುಮಾನ ೫ ಸಾವಿರ ರೂಪಾಯಿಗಳು, ಎರಡನೇಯ ಬಹುಮಾನ ೩೫೦೦ ರೂಪಾಯಿಗಳು, ಮೂರನೇಯ ಬಹುಮಾನ ೨೫೦೦ ಹಾಗೂ ಸಮಾಧಾನಕರ ಬಹುಮಾನ ೧೦೦೦ ರೂಪಾಯಿಗಳು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೯೪೪೯೮೪೬೯೬೩, ೯೪೪೯೮೪೬೯೬೪ ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply