ಕೊಪ್ಪಳ ಆಗಸ್ಟ್ ೨೮ : ಮೇಜರ್ ಧ್ಯಾನಚಂದ್ ರವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಮ್ಯಾರಾಥಾನ್ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಗಸ್ಟ್ ೨೯ರಂದು ಕೊಪ್ಪಳದಲ್ಲಿ ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಮ್ಯಾರಾಥಾನ್ ಓಟವು ಅಂದು ಬೆಳಿಗ್ಗೆ ೭ಕ್ಕೆ ಜಿಲ್ಲಾಡಳಿತ ಭವನದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ಹಮ್ಮಿಕೊಳ್ಳಲಾಗಿದೆ. ವಿವಿಧ ಸ್ಪರ್ಧೆಗಳನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೯.೩೦ ಗಂಟೆಯಿಂದ ನೋಂದಾವಣಿ ಮೂಲಕ ಪ್ರಾರಂಭಿಸಲಾಗುವುದು, ಮ್ಯಾರಾಥಾನ್ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ಧಾಳುಗಳಿಗೆ ಯಾವುದೇ ಪ್ರಯಾಣ ಭತ್ಯೆ, ದಿನಭತ್ಯೆ, ನಗದು ಬಹುಮಾನ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಗದಗ ರಸ್ತೆ, ಕೊಪ್ಪಳ ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.