ಸವದತ್ತಿ : ಚಂದ್ರಯಾನ-೩ ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂದು ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ ತಿಳಿಸಿದೆ.
ಭೂಮಿಯಿಂದ ಉಡಾವಣೆಯಾದ ಚಂದ್ರಯಾನ ನೌಕೆಯು, ಈಗ ತನ್ನ ಉದ್ದೇಶಿದ ಗುರಿಯಾದ ಚಂದ್ರನ ಕಕ್ಷೆಯನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಪ್ರವೇಶಿಸುವ ಮೂಲಕ ಮತ್ತೊಂದು ಹಂತವನ್ನು ಸಫಲವಾಗಿ ಪೂರ್ಣಗೊಳಿಸಿದಂತಾಗಿದೆ.
ನಮ್ಮ ಭಾರತ ಮಹತ್ವಾಕಾಂಕ್ಷೆಯ ಯೋಜನೆ ಚಂದ್ರಯಾನ-೩ ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಭೂಮಿಯಿಂದ ಉಡಾವಣೆಯಾದ ಚಂದ್ರಯಾನ ನವಕೆಯು ಈಗ ತನ್ನ ಉದ್ದೇಶಿದ ಗುರಿಯಾದ ಚಮದ್ರನ ಕಕ್ಷೆಯನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಪ್ರವೇಶಿಸುವ ಮೂಲಕ ಸಫಲವಾಗಿ ಪೂರ್ಣಗೊಳಿಸಿದಂತಾಗಿದೆ. ಭಾರತ ದೇಶದ ವಿಜ್ಞಾನಿಗಳ ಶಕ್ತಿ ಇಡಿ ವಿಶ್ವಕ್ಕೆ ಮಾದರಿಯಾಗಬೇಕು ಎಂದು ಹೇಳಿದರು.