This is the title of the web page
This is the title of the web page

Please assign a menu to the primary menu location under menu

Local News

ಗ್ರಾಮ, ನಗರಗಳಲ್ಲ್ಲಿ ಸ್ಮಶಾನಕ್ಕೆ ಜಾಗ ಮೀಸಲು: ಒತ್ತುವರಿ ಸರ್ಕಾರಿ ಜಾಗ ತೆರವಿಗೆ ಕ್ರಮ


ಬೆಳಗಾವಿ, ಮೇ.೧೩: ಹೈ ಕೋರ್ಟ್ ನಿರ್ದೇಶನದ ಮೇರೆಗೆ ಸರ್ಕಾರಿ ಜಮೀನು, ಕೆರೆ, ಕುಂಟೆ, ಹಳ್ಳ, ಸರೋವರ ಅಥವ ಇನ್ನಿತರ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ, ಅಥವ ಹಾದಿ ಎಂದು ನಮೂದಾಗಿರುವ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಜಿಲ್ಲಾಧಿಕಾರಿ ಅಥವ ತಹಶೀಲ್ದಾರ ಅವರಿಗೆ ದೂರು ನೀಡಬೇಕು. ಜಮೀನು ಒತ್ತುವರಿ ತೆರವುಗೊಳಿಸಿ ಸ್ಮಶಾನಕ್ಕಾಗಿ ಕಾಯ್ದಿರಸಲಾಗುತ್ತದೆ ಎಂದು ಬೆಳಗಾವಿ ತಹಶೀಲ್ದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರ್ದೇಶಿತ ಸೂಚನೆಗಳು:
೧. ಸರ್ಕಾರದ ಜಮೀನು ಲಭ್ಯವಿರುವ ಕಡೆ ಸ್ಮಶಾನ ಉದ್ದೇಶಕ್ಕಾಗಿ ೨ ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸಲು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದೆ.
೨. ಕರ್ನಾಟಕ ಭೂ ಕಂದಾಯ ಕಂದಾಯ ಕಾಯ್ದೆ ೧೯೬೪ರ ಕಲಂ ೭೧ರ ಅಡಿ ಜಿಲ್ಲಾಧಿಕಾರಿಗಳು ಸರ್ಕಾರಿ ಜಮೀನು ಕಾಯ್ದಿರಿಸುವುದು
೩. ಗೋಮಾಳ ಜಮೀನು ನಿಗದಿತ ಪ್ರಮಾಣಕ್ಕಿಂತ ಕಡಿಮೆ ಇದ್ದಾಗಲೂ ಸ್ಮಶಾನಕ್ಕಾಗಿ ಮೀಸಲಿಡಲು ಕರ್ನಾಟಕ ಭೂ ಕಂದಾಯ ನಿಯಮಗಳು, ೧೯೯೯೬ರ ನಿಮಯ ೯೭(೪)ರಲ್ಲಿ ಜಿಲ್ಲಾಧಿಕಾರಿಗೆ ಅವಕಾಶ ಕಲ್ಪಿಸಲಾಗಿದೆ.
೪. ಸರ್ಕಾರಿ ಜಮೀನು ‘ಬ’ ಖರಾಬು ಎಂದು ವರ್ಗೀಕೃತವಾಗಿದ್ದಲ್ಲಿ ಸ್ಮಶಾನದ ಉದ್ದೇಶವು ಸಾರ್ವಜನಿಕ ಉದ್ದೇಶವಾಗಿರುವುದರಿಂದ ಅಂತಹ ಜಮೀನುಗಳನ್ನು ಸಹ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಕರ್ನಾಟಕ ಭೂ ಕಂದಾಯ ಕಾಯ್ದೆ ೧೯೬೪ರ ಕಲಂ ಅನ್ವಯ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.
೫. ಒತ್ತುವರಿಯಿಂದ ತೆರವುಗೊಳಿಸಿರುವ ಸರ್ಕಾರಿ ಜಮೀನುಗಳನ್ನು ಕರ್ನಾಟಕ ಭೂ ಕಂದಾಯ ಕಾಯ್ದೆ ೧೯೬೪ರ ಕಲಂ ೭೧ ರನ್ವಯ ಜಿಲ್ಲಾಧಿಕಾರಿಗಳು ಸ್ಮಶಾನದ ಉದ್ದೇಶಕ್ಕಾಗಿ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.
೬. ಸರ್ಕಾರಿ ಜಮೀನಿನಲ್ಲಿ ಅನಧೀಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮೀಕರಣಕ್ಕಾಗಿ ಸಲ್ಲಿಸುವ ಅರ್ಜಿಗಳ ಪೈಕಿ ಅನರ್ಹ ಅರ್ಜಿಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿ ಅಂತಹ ಅನರ್ಹ ಅರ್ಜಿಗಳನ್ನು ವಜಾಗೊಳಿಸಿ ಜಮೀನನ್ನು ಸರ್ಕಾರ ವಶಕ್ಕೆ ಪಡೆದು ಸ್ಮಶಾನಕ್ಕಾಗಿ ಕಾಯ್ದಿರಿಸುವುದು.
೭. ಈ ಮೇಲ್ಕಂಡ ಎಲ್ಲ ಕ್ರಮಗಳನ್ನು ಕೈಗೊಂಡ ನಂತರವೂ ಸಹ ಯಾವುದೇ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಕಾಯ್ದಿರಿಸಲು ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದಲ್ಲಿ ಅಂತಹ ಗ್ರಾಮಗಳಲ್ಲಿ ಮಾರ್ಗಸೂಚಿ ಮೌಲ್ಯದ ಮೂರು ಪಟ್ಟು ದರದಲ್ಲಿ ಖಾಸಗಿಯವರಿಂದ ಜಮೀನುಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಮೂಲಕ ತಮ್ಮ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ದೂರು/ ಅರ್ಜಿ ಸಲ್ಲಿಸಬಹುದು ಎಂದು ಬೆಳಗಾವಿ ತಹಶೀಲ್ದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply