This is the title of the web page
This is the title of the web page

Please assign a menu to the primary menu location under menu

State

ಸೆ. ೨೩ ರಂದು ಕೊಪ್ಪಳದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ


ಕೊಪ್ಪಳ, ಸೆ. ೨೨: ಕೊಪ್ಪಳ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿಯ ನೇತೃತ್ವದಲ್ಲಿ ಸೆ. ೨೩ ರಂದು ಕೊಪ್ಪಳ ತಾಲ್ಲೂಕಿನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ಲೋಕಾಯುಕ್ತ ಕಚೇರಿಯ ಅಧಿಕಾರಿಗಳು ಸೆ. ೨೩ ರಂದು ಬೆಳಿಗ್ಗೆ ೧೧ ಗಂಟೆಯಿಂದ ೦೨ ಗಂಟೆಯವರೆಗೆ ಕೊಪ್ಪಳದ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದು, ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ, ದೂರು ಸಲ್ಲಿಸಬಹುದು.
ಸಾರ್ವಜನಿಕರು ಸರ್ಕಾರಿ ಕಚೇರಿಯ ಯಾವುದೇ ಅಧಿಕಾರಿ ತಮ್ಮ ಕೆಲಸಕ್ಕಾಗಿ ಲಂಚದ ಬೇಡಿಕೆ ಇಟ್ಟಲ್ಲಿ ಅಥವಾ ಅಕ್ರಮವಾಗಿ ಆಸ್ತಿ ಗಳಿಸಿದ್ದು ಕಂಡುಬಂದರೆ ಮತ್ತು ಸರ್ಕಾರಿ ಯೋಜನೆಗಳ ಅನುಷ್ಠಾನ ಮಾಡಲು ಅಧಿಕಾರಿಗಳು ಅನಾವಶ್ಯಕ ವಿಳಂಬ ಮಾಡುತ್ತಿರುವುದು, ಫಲಾನುಭವಿಗಳಿಗೆ ಸರ್ಕಾರಿ ಯೋಜನೆ ತಲುಪಿಸದೆ ಇರುವ ಹಾಗೂ ಕಳಪೆಕಾಮಗಾರಿ ನಡೆಸಿ ಹಣ ದುರುಪಯೋಗ ಮಾಡುವಂತಹ ಪ್ರಕರಣಗಳಲ್ಲಿ ದೂರು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: ೦೮೫೩೯-೨೯೫೨೦೦, ೨೨೦೫೩೩ ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply