ಕೊಪ್ಪಳ ಡಿಸೆಂಬರ್ ೦೯ (ಕರ್ನಾಟಕ ವಾರ್ತೆ): ಕರ್ನಾಟಕ ಲೋಕಾಯುಕ್ತ, ಕೊಪ್ಪಳ ಕಛೇರಿ ವತಿಯಿಂದ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿಯೊಂದಿಗೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಡಿಸೆಂಬರ್ ೧೩ ರಿಂದ ೧೬ ರವರೆಗೆ ಸಾರ್ವಜನಿಕರಿಂದ ದೂರು/ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಡಿಸೆಂಬರ್ ೧೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಕುಷ್ಟಗಿಯ ಹಳೆ ಪ್ರವಾಸಿ ಮಂದಿರದಲ್ಲಿ, ಮಧ್ಯಾಹ್ನ ೦೨.೩೦ ಗಂಟೆಗೆ ಕನಕಗಿರಿಯ ಪ್ರವಾಸಿ ಮಂದಿರದಲ್ಲಿ, ಡಿಸೆಂಬರ್ ೧೪ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಯಲಬುರ್ಗಾದ ಹೊಸ ಸರ್ಕ್ಯೂಟ್ ಹೌಸ್‌ನಲ್ಲಿ, ಮಧ್ಯಾಹ್ನ ೦೨.೩೦ ಗಂಟೆಗೆ ಕುಕನೂರಿನ ಹೊಸ ಸರ್ಕ್ಯೂಟ್ ಹೌಸ್‌ನಲ್ಲಿ, ಡಿ.೧೫ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಗಂಗಾವತಿಯ ಹೊಸ ಪ್ರವಾಸಿ ಮಂದಿರದಲ್ಲಿ, ಮಧ್ಯಾಹ್ನ ೦೨.೩೦ ಗಂಟೆಗೆ ಕಾರಟಗಿಯ ಪ್ರವಾಸಿ ಮಂದಿರದಲ್ಲಿ ಹಾಗೂ ಡಿ.೧೬ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಈ ಸಭೆಗಳಿಗೆ ಹಾಜರಾಗಿ ತಮ್ಮ ಕುಂದುಕೊರತೆ ದೂರುಗಳನ್ನು ಸಲ್ಲಿಸಿ, ಪರಿಹಾರ ಕಂಡುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ : ೦೮೫೩೯-೨೯೫೨೦೦, ೨೨೦೫೩೩ ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Gadi Kannadiga > State > ಲೋಕಾಯುಕ್ತದಿಂದ ಅಹವಾಲು ಸ್ವೀಕಾರ ಸಭೆ