This is the title of the web page
This is the title of the web page

Please assign a menu to the primary menu location under menu

Local News

ಪಿಎಂ-ಎಸ್‌ವೈಎಂ ಯೋಜನೆಯಡಿ ಮೆಗಾ ನೋಂದಣಿ ಪಿಎಂ-ಎಸ್‌ವೈಎಂ ಮಹಾತ್ವಾಕಾಂಕ್ಷಿ ಯೋಜನೆ: ಎನ್ ಬಂಗಾರಪ್ಪ


ಬೆಳಗಾವಿ, ಆ.೧೧: ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಭಾರತ ಸರ್ಕಾರವು ಪ್ರಧಾನಮಂತ್ರಿ ಶ್ರಮ್‌ಯೋಗಿ ಮಾನ್-ಧನ್ ಎಂಬ ಮಹತ್ವಾಕಾಂಕ್ಷಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ಅರ್ಹ ಫಲಾನುಭವಿಗಳು ಈ ಯೋಜನೆಯಡಿ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಯೋಜನಾಧಿಕಾರಿ ಎನ್ ಬಂಗಾರಪ್ಪ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಗುರುವಾರ (ಆ.೧೧) ಕಾ.ರಾ.ವಿ.ನಿಗಮ ಹಾಗೂ ಸಿ ಎಸ್ ಸಿ ಬೆಳಗಾವಿ ಇವರ ಸಹಯೋಗದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಪಿಎಂ-ಎಸ್‌ವೈಎಂ ದಯೋಜನೆಯಡಿ ಮೆಗಾ ನೋಂದಣಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಹಮಾಲಿಗಳು, ಮನೆ ಕೆಲಸದವರು, ಆಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಇತರೆ ಉದ್ಯೋಗಗಳ ಅಸಂಘಟಿತ ಕಾರ್ಮಿಕರಿಗೆ ಪಿಎಂ-ಎಸ್‌ವೈಎಂ ಯೋಜನೆ ಸಂಧ್ಯಾಕಾಲದಲ್ಲಿ ಸಂಜೀವಿನಿಯಾಗಿದೆ ಎಂದು ಯೋಜನಾಧಿಕಾರಿ ಎನ್ ಬಂಗಾರಪ್ಪ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಿ ಎಸ್ ಸಿ ಜಿಲ್ಲಾ ಸಂಯೋಜಕ ಮಲ್ಲಿಕಾರ್ಜುನ ಕರಿರುದ್ರಣ್ಣನವರ ಅವರು ಪಿಎಂ-ಎಸ್‌ವೈಎಂ ನೋಂದಣಿ ಪ್ರಕ್ರಿಯೆ, ಉಪಯೋಗದ ಕುರಿತು ಸ್ವಯಂ ಉದ್ಯೋಗಿ-ಉದ್ಯಮಿಗಳಿಗೆ ವಿವರಿಸಿದರು.
ಕಾರ್ಮಿಕರು ಅಸಂಘಟಿತ ವಲಯದ ಕಾರ್ಮಿಕರಾಗಿದ್ದು, ೧೮ ರಿಂದ ೪೦ ವರ್ಷದೊಳಗಿರಬೇಕು ಅವರ ಮಾಸಿಕ ಆದಾಯ ೧೫ ಸಾವಿರ ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಆದಾಯ ತೆರಿಗೆ /ಇ.ಎಸ್.ಐ./ಪಿ.ಎಫ್/ಎನ್.ಪಿ.ಎಸ್. ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು. ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಸಂಖ್ಯೆ ಹೊಂದಿರಬೇಕು. ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ “ಕಾಮನ್ ಸರ್ವೀಸ್ ಸೆಂಟರ್ (ಸಿ.ಎಸ್.ಸಿ.)ಗಳಲ್ಲಿ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಿಕೊಳ್ಳಬಹುದು ಎಂದರು. ಸಿ.ಎಸ್.ಸಿ.ಗಳ ವಿವರಗಳನ್ನು ಹತ್ತಿರದ ಎಲ್.ಐ.ಸಿ. ಶಾಖೆಗಳು, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಇ.ಎಸ್.ಐ. ಕಾರ್ಪೋರೇಷನ್ ಹಾಗೂ ಭವಿಷ್ಯನಿಧಿ ಸಂಘಟನೆಯ ಕಛೇರಿಗಳು ಹಾಗೂ ಇಲಾಖೆಯ ವೆಬ್ ವಿಳಾಸ hಣಣಠಿ://ಟoಛಿಚಿಣoಡಿ.ಛಿseಛಿಟouಜ.iಟಿ ನಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ೧೮೦೦-೨೬೭-೬೮೮೮ ಟೋಲ್ ಫ್ರೀ ಸಂಖ್ಯೆಯನ್ನೂ ಸಂಪರ್ಕಿಸಬಹುದು ಎಂದು ಮಲ್ಲಿಕಾರ್ಜುನ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾ.ರಾ.ವಿ.ನಿಗಮದ ಉಪನಿರ್ದೇಶಕ ಸಿ.ಎನ್.ಮಂಡಳ, ಜಿಲ್ಲಾ ವ್ಯವಸ್ಥಾಪಕ ಥಾಮಸ್ ಲೋಬೋ, ಜಿಲ್ಲೆಯ ಎಲ್ಲ ಸ್ವ ಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು. ಸುಹಾಸ್ ಕತ್ಕೇಕರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


Gadi Kannadiga

Leave a Reply