This is the title of the web page
This is the title of the web page

Please assign a menu to the primary menu location under menu

Local News

ಎಲ್ಲಾ ರೈತರಿಗೆ ಕಡ್ಡಾಯವಾಗಿ ಕೃಷಿ ಸಾಲ ನೀಡಿ : ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ


ಬೆಳಗಾವಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಪ್ರತಿಯೊಬ್ಬ ರೈತರಿಗೂ ಕಡ್ಡಾಯವಾಗಿ ಕೃಷಿ ಸಾಲವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ(ಏ.22) ನಡೆದ ಜಿಲ್ಲಾ ಅಗ್ರಣ ಬ್ಯಾಂಕಿನ ಸಲಹಾ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಏಪ್ರಿಲ್ 24ರಂದು ಪಂಚಾಯತ್ ರಾಜ್ ದಿನ ಕಿಸಾನ್ ಭಾಗೇಧಾರಿ ಪ್ರಾಥಮಿಕತಾ ಹಮಾರಿ ಎಂಬ ವಿನೂತನ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿಗಳು ಚಾಲನೆ ನೀಲಿದ್ದಾರೆ. ಈ ಕಾರ್ಯಕ್ರಮ ಪಿ ಎಮ್ ಕಿಸಾನ್ ಯೋಜನೆಯಲ್ಲಿ ಫಲಾನುಭವಿಗಳಾಗಿದ್ದರೂ ಕೃಷಿ ಸಾಲ ಪಡೆಯದೇ ಇದ್ದ ರೈತರಿಗೆ ಹತ್ತಿರ ಬ್ಯಾಂಕ್‍ಗಳಲ್ಲಿ ಸಾಲ ಪಡೆದುಕೊಳ್ಳುವುದಕ್ಕೆ ಅನುಕೂಲ ಆಗಲಿದೆ. ಜೊತೆಗೆ ಪ್ರಧಾನ ಮಂತ್ರಿಗಳ ಸಾಮಾಜಿಕ ಸುರಕ್ಷಾ ಯೋಜನಗಳಾದ ಪಿಎಂಎಸ್‍ಬಿವೈ, ಪಿಎಂಜೆಜೆಬಿವೈ ಹಗೂ ಅಟಲ್ ಪಿಂಚಣ ಯೋಜನೆಗಳಿಗೂ ಕೂಡ ಹೊಸದಾಗಿ ಸೇರ್ಪಡೆಗೊಳ್ಳಬಹುದು ಎಂದು ತಿಳಿಸಿದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಹೆಸರು ನೋಂದಾಯಿಸಿಲ್ಪಟ್ಟು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯದೇ ಇದ್ದ ರೈತರು ಏಪ್ರಿಲ್ 24ರಿಂದ ಏಪ್ರಿಲ್ 30 2022ರೊಳಗಾಗಿ ತಮ್ಮ ಹತ್ತಿರ ಬ್ಯಾಂಕ್‍ಗಳನ್ನು ಸಂಪರ್ಕಿಸಿ ಯೋಜನೆಯ ಲಾಭ ಪಡೆದುಕೊಳ್ಳಬಹುದು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ರಾಷ್ಟ್ರೀಕೃತ, ಗ್ರಾಮೀಣ, ಹಾಗೂ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ಗಳ ವ್ಯವಸ್ಥಾಪಕರಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿರುವ ರಾಷ್ಟ್ರೀಕೃತ, ಗ್ರಾಮೀಣ, ಹಾಗೂ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ಗಳಿಂದ ಮಾರ್ಚ್ 31 2022ರವರೆಗೆ ಕರ್ನಾಟಕದಲ್ಲಿ 58.42 ರೈತರು ನೋಂದಣ ಮಾಡಿಕೊಂಡಿದ್ದು, ಬೆಳಗಾವಿಯಲ್ಲಿ 617276 ರೈತರು ನೋಂದಣ ಮಾಡಿಕೊಂಡು ಕಿಸಾನ್ ಸಮ್ಮಾನ್ ನಿಧಿಯ ಫಲಾನುಭವಿಗಳಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರತಿ ವರ್ಷ ಆರು ಸಾವಿರ ರೂಪಾಯಿಗಳನ್ನು ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. ಸಿಎಸ್‍ಸಿಗಳಲ್ಲಿ ರೈತರು ನೋಂದಣ ಮಾಡಿಕೊಳ್ಳಬಹುದಾಗಿದ್ದು, ಪಿಎಂ ಕಿಸಾನ್ ಡಾಟಾ ಬೇಸ್‍ನಲ್ಲಿರುವ ಮಾಹಿತಿಯನ್ನು ಆಧಾರ್ ಡಾಟಾ ಬೇಸ್‍ನಲ್ಲಿರುವ ರೀತಿಯಲ್ಲಿ ತಿದ್ದುಪಡಿ ಮಾಡುವುದಕ್ಕೆ ಅವಕಾಶ ಇದೆ. ಇಲ್ಲಿವರೆಗೆ 12.35 ಕೋಟಿ ಕುಟುಂಬಗಳು ಈ ಯೋಜನೆಯಲ್ಲಿ ಹೆಸರು ನೋಂದಾಯಿಸಿ ಕಿಸಾನ್ ಕ್ರೆಡಿಟ್ ಕಾರ್ಡ್‍ನ್ನು, ಬ್ಯಾಂಕಿಗ್ ವ್ಯವಸ್ಥೆ ಮೂಲಕ ಪಡೆದುಕೊಂಡಿದ್ದಾರೆ. ದೇಶಾದ್ಯಂತ ಪೂರ್ಣ ಪ್ರಮಾಣದಲ್ಲಿ ರೈತರು ಈವರೆಗೆ ಕಿಸಾನ್ ಕ್ರೆಡಿಟ್ ಕಾರ್ಡ್‍ನ್ನು ಪಡೆದುಕೊಂಡಿಲ್ಲ ಹೀಗಾಗಿ ರೈತರು ಯೋಜನೆಯ ಲಾಭ ಪಡೆದುಕೊಳ್ಳಲು ಮುಂದಾಗಬೇಕು ಎಂದರು.
ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಶಿವನಗೌಡ ಪಾಟೀಲ, ಜಿಲ್ಲಾ ಅಗ್ರಣ ಬ್ಯಾಂಕ್ ವ್ಯವಸ್ಥಾಪಕರಾದ ರಾಹುಲ್ ಹಾಗೂ ಇತರರು ಉಪಸ್ಥಿತರಿದ್ದರು.


Gadi Kannadiga

Leave a Reply