ಬೆಂಗಳೂರು: ದೀಪಾವಳಿ ಹಬ್ಬದ ಬಲಿಪಾಡ್ಯಮಿಯಂದು ರಾಜ್ಯ ಸಾರ್ಕಾರದ ಅಧೀನದಲ್ಲಿ ಬರುವಂತಹ ಮುಜರಾಯಿ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸುವಂತೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆದೇಶ ನೀಡಿದ್ದಾರೆ.
ಈ ಕುರಿತು ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಬಲಿಪಾಡ್ಯಮಿಯಂದು ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಗೋಪೂಜೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿದ್ದು, ಗೋವುಗಳ ಮಹತ್ವ ಮತ್ತು ಅವುಗಳ ರಕ್ಷಣೆ ಕುರಿತಾಗಿ ಜಾಗೃತಿ ಮೂಡಿಸಬೇಕಿದೆ. ಹಾಗಾಗಿ ಬಲಿಪಾಡ್ಯಮಿಯ ಗೋಧೂಳಿ ಲಗ್ನದಲ್ಲಿ ಗೋಪೂಜೆ ನಡೆಸಲು ಸಚಿವೆ ಶಶಿಕಲಾ ಜೊಲ್ಲೆ ಆದೇಶ ನೀಡಿದ್ದಾರೆ.