This is the title of the web page
This is the title of the web page

Please assign a menu to the primary menu location under menu

Local News

ವಿವಿಧ ಸಂಘಟನೆಗಳಿಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಅದ್ಧೂರಿ ಸನ್ಮಾನ


ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಂಡಿಗೇರಿ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭಾನುವಾರ ಸನ್ಮಾನಿಸಲಾಯಿತು.
ಕ್ಷೇತ್ರದ ಜನರ ಪ್ರೀತಿಯ ಋಣವನ್ನು ತೀರಿಸಲು ನನ್ನಿಂದ ಸಾಧ್ಯವೇ ಇಲ್ಲ. ಸಾಧ್ಯವಾದಷ್ಟು ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರುವ ಮೂಲಕ ನನ್ನಿಂದಾದ ಮಟ್ಟಿಗೆ ನಿಮ್ಮ ಸೇವೆಯನ್ನು ಮಾಡುತ್ತೇನೆ. ನಿಮ್ಮೆಲ್ಲರ ಸಹಕಾರ ಎಂದೆಂದೂ ನನ್ನ ಮೇಲಿರಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಭಾವುಕರಾಗಿ ನುಡಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸಿ ಸಿ ಪಾಟೀಲ, ಸುರೇಶ ಇಟಗಿ, ರವಿ ಮೇಳೆದ್, ಸಿದ್ದ ಹಾವಣ್ಣವರ, ಪ್ರಕಾಶ ಪಾಟೀಲ, ಶಿವು ಚಂದು, ಶಂಕರಗೌಡ ಪಾಟೀಲ, ಶಂಕರಗೌಡ ಮೇಳೆದ್, ಅಡಿವೇಶ ಇಟಗಿ, ಶ್ರೀಕಾಂತ ಮಧುಭರಮಣ್ಣವರ ಹಾಗೂ ನೂರಾರು ಗ್ರಾಮಸ್ಥರು, ಮಹಿಳೆಯರು ಉಪಸ್ಥಿತರಿದ್ದರು.

Leave a Reply