ಬೆಳಗಾವಿ: ವಿದ್ಯಾರ್ಥಿಗಳು ಶಿಕ್ಷಣ ಪೂರೈಸಿದ ನಂತರ ಕೆಲಸ ಹುಡುಕುವ ಬದಲು ಅವರೇ ಸ್ವಂತ ಉದ್ಯಮ ಸ್ಥಾಪಿಸಿ ಇತರರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಮಾಹಿತಿ ಒದಗಿಸಲು ಹಮ್ಮಿಕೊಳ್ಳಲಾಗಿದ್ದ ಕೈಗಾರಿಕಾ ಅದಾಲತ್ ಕಾರ್ಯಕ್ರಮಕ್ಕೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಚಾಲನೆ ನೀಡಿದರು.
ಕೈಗಾರಿಕಾ ಇಲಾಖೆಯಿಂದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಕೈಗಾರಿಕಾ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯು ಉದ್ದಿಮೆ ಹಾಗೂ ಉದ್ಯೋಗಕ್ಕೆ ಪ್ರೊತ್ಸಾಹ ನೀಡುವ ನಿಟ್ಟಿನಲ್ಲಿ ಒಂದು ದಿನದ ಕಾರ್ಯಕ್ರಮ ಹಮ್ಮಿಕೊಲ್ಳಲಾಗಿದೆ.
ಕಾರ್ಯಕ್ರಮದಲ್ಲಿ ಯೇಕಾಸ್ ಕಂಪನಿಯ ಸಂಸ್ಥಾಪಕ ಅರವಿಂದ ಮಲ್ಲಿಗೆರಿ , ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬೆಳಗಾವಿ ದಕ್ಷಿಣ ಭಾಗದ ಶಾಸಕ ಅಭಯ್ ಪಾಟೀಲ್, ಜಿಲ್ಲಾಧಿಕಾರಿಗಳಾದ ಎಂ, ಜಿ ಹಿರೇಮಠ ಸೇರಿದಂತೆ ಯಶಸ್ವಿ ಉದ್ದಿಮೆದಾರರು ಹಾಗೂ ಕೈಗಾರಿಕಾ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.