This is the title of the web page
This is the title of the web page

Please assign a menu to the primary menu location under menu

Crime NewsLocal News

ಕಾಣೆಯಾದ ಮಹಿಳೆ ಶವವಾಗಿ ಪತ್ತೆ


ಬೆಳಗಾವಿ: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಖಾನಾಪೂರ ತಾಲ್ಲೂಕಿನ ಹಲಸಿ ಗ್ರಾಮದಲ್ಲಿ ನಡೆದಿದೆ.

ಪ್ರಣಾಲಿ ಪರಶುರಾಮ ಗುರವ(21) ಮೃತ ದುರ್ದೈವಿ ಮಹಿಳೆಯಾಗಿದ್ದು ಬಾವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಆಗಸ್ಟ್ 11ರಂದು ಬೆಳಿಗ್ಗೆ 8.30ರ ಸುಮಾರಿಗೆ ಮೃತ ಪ್ರಣಾಲಿ ಮನೆಯಲ್ಲಿ ಯಾರಿಗೂ ಹೇಳದೇ ಕೇಳದೇ ಮನೆ ಬಿಟ್ಟು ಹೋಗಿದ್ದಳು. ಬಳಿಕ ಮರಳಿ ಮನೆಗೆ ಬಂದಿರಲಿಲ್ಲ. ಈ ಸಂಬಂಧ ನಂದಗಡ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಆದರೆ ಇಂದು ಬೆಳಿಗ್ಗೆ ಹಲಸಿಯ ಪ್ರದೀಪ್ ಪತ್ತೆದಾರ ಎಂಬುವವರ ಭಾವಿಯಲ್ಲಿ ಆಕೆಯ ಶವ ಪತ್ತೆಯಾಗಿದೆ.

ಮೃತ ಮಹಿಳೆ ಪ್ರಣಾಲಿಗೆ ಹೊಟ್ಟೆ ನೋವಿನ ತೊಂದರೆ ಇತ್ತು ಇದನ್ನು ಸಹಿಸಲಾರದೆ ಗಂಡನ ಮನೆಯಿಂದ ತನ್ನ ಅಜ್ಜಿಯ ಮನೆಗೆ ಬಂದು ಆಸ್ಪತ್ರೆಗೆ ತೋರಿಸಲು ಬಂದಿದ್ದಳು. ಆದರೂ ಕಡಿಮೆ ಆಗದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಭಾವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ.


Gadi Kannadiga

Leave a Reply