This is the title of the web page
This is the title of the web page

Please assign a menu to the primary menu location under menu

Local News

ಮತ್ತೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಶಾಸಕ ಅನಿಲ್ ಬೆನಕೆ


ಬೆಳಗಾವಿ: ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದ್ದು, ಬಿಜೆಪಿ ಶಾಸಕ ಅನಿಲ್ ಬೆನಕೆ ಮತ್ತೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.

ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಮತಗಟ್ಟೆಯಲ್ಲಿ ಬಿಜೆಪಿ ಶಾಸಕ ಅನಿಲ್ ಬೆನಕೆ ಮತಗಟ್ಟೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಶಾಸಕರು ಮತಗಟ್ಟೆಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದು, ಮತದಾರರ ಆಕ್ರೋಶಕ್ಕೆ ಕಾರಣವಾಗಿದೆ.
ಕಳೆದವಿಧಾನಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ವಿರುದ್ಧ ವಾರಂಟ್ ಜಾರಿಯಾಗಿತ್ತು. ಆದರೂ ಎಚ್ಚೆತ್ತುಕೊಳ್ಳದ ಶಾಸಕರು ಇದೀಗ ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಶಾಸಕ ಅನಿಲ್ ಬೆನಕೆ ವಿರುದ್ಧ ಚುನಾವಣಾಧಿಕಾರಿ ದೂರು ನೀಡಲಿದ್ದಾರೆ ಎಂದರು.

Gadi Kannadiga

Leave a Reply