ಬೆಳಗಾವಿ : ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಬೆಂಗಳೂರಿನಲ್ಲಿ ವೈಧ್ಯಕೀಯ ಸಚಿವರಾದ ಡಾ. ಕೆ. ಸುಧಾಕರ ಅವರನ್ನು ಬೇಟಿಯಾಗಿ ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ರಾಜೀವ ಗಾಂದಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರವನ್ನು ಸ್ಥಾಪಿಸುವ ಯೋಜನೆಯನ್ನು ಕೈಬಿಟ್ಟು, ಬೇರೆಡೆ ಸ್ಥಳಾಂತರಗೊಳ್ಳುತ್ತಿರುವ ವಿಷಯವನ್ನು ಅರಿತ ಶಾಸಕರು ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿಯೇ ಪ್ರಾದೇಶಿಕ ಕೇಂದ್ರವನ್ನು ಸ್ಥಾಪಿಸುವಂತೆ ಮನವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯು ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿ ಜಿಲ್ಲೆಯಾಗಿರುವುದರಿಂದ ವಿದ್ಯಾರ್ಥಿಗಳ ಸಂಖ್ಯೆಯು ಹೆಚ್ಚಾಗಿದ್ದು, ಬೆಳಗಾವಿ ಜಿಲ್ಲೆಯು ರಾಜ್ಯದ 2 ನೇ ರಾಜಧಾನಿ ಎಂದೇ ಪ್ರಸಿದ್ದಿಯಾಗಿರುತ್ತದೆ. ಕಾರಣ ಜಿಲ್ಲಾ ಮಟ್ಟದ ಎಲ್ಲ ಕೇಂದ್ರ ಕಚೇರಿಗಳು ಬೆಳಗಾವಿಯ ಉತ್ತರ ಮತಕ್ಷೇತ್ರದಲ್ಲಿ ಬರುವುದರಿಂದ ಬೆಳಗಾವಿ ಜಿಲ್ಲೆಯು ಪ್ರಾದೇಶಿಕ ವಿಭಾಗ ಕೇಂದ್ರವು ಆಗಿರುವುದರಿಂದ ರಾಜೀವ ಗಾಂದಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸದೆ ಬೆಳಗಾವಿ ನಗರದಲ್ಲಿಯೇ ಸ್ಥಾಪಿಸುವಂತೆ ಮಾನ್ಯ ವೈಧ್ಯಕೀಯ ಸಚಿವರನ್ನು ಬೇಟಿ ಮಾಡಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.