ಬೆಳಗಾವಿ : ವಿಶ್ವ ಕಾರ್ಮಿಕ ದಿನಾಚರಣೆಯ ನಿಮಿತ್ಯ ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ನಗರದ ವಡ್ಡರವಾಡಿ ರಾಮನಗರದಲ್ಲಿ ಕಾರ್ಮಿಕ ದಿನಾಚರಣೆಯನ್ನು ಆಚರಿಸುವುದರೊಂದಿಗೆ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಭಿರ ಹಾಗೂ ಕಾರ್ಮಿಕ ಕಿಟ್ ವಿತರಣಾ ಸಮಾರಂಭಕ್ಕೆ ಶಾಸಕ ಅನಿಲ ಬೆನಕೆ ಹಾಗೂ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ರವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಎಲ್ಲ ಕಟ್ಟಡ ಕಾರ್ಮಿಕರಿಗೆ ವಿಶ್ವ ಕಾರ್ಮಿಕ ದಿನಾಚರಣೆಯ ಶುಭಾಷಯಗಳನ್ನು ತಿಳಿಸಿದರು. ಕಟ್ಟಡ ಕಾರ್ಮಿಕರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಹಲವಾರು ಯೋಜನೆಗಳನ್ನು ಜಾರಿಗೆ ತಂದು ಕಾರ್ಮಿಕರ ಏಳ್ಗೆಗೆ ಶ್ರಮಿಸುತ್ತಿವೆ.
ಅದರಂತೆಯೆ ಎಲ್ಲ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರು ಕಾರ್ಮಿಕ ಕಾರ್ಡಗಳನ್ನು ಮಾಡಿಸಿಕೊಂಡು ಸರ್ಕಾರಗಳು ನೀಡಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು. ನಂತರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಭಿರನ್ನು ಉದ್ಘಾಟಿಸುವುದರೊಂದಿಗೆ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಿಟ್ಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ, ಬೆಳಗಾವಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಶ್ರೀಮತಿ. ತರನಮ್ಮ ಎ. ಬಿ. , ಭೋಸಲೆ, ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿವರ್ಗ, ಸ್ಥಳಿಯರಾದ ಹಣಮಂತ ಕಾಗಲಕರ, ಭೀಮರಾವ ಪಾತ್ರೋಟ, ಮಾರುತಿ ಬಡಸಕರ, ರವಿ ಗಾಡಿವಡ್ಡರ, ಮಾರುತಿ ಬಿರನೊಳ್ಳಿ, ರವಿ ಪಾತ್ರೋಟ, ಸಾಯಿನಾಥ ಹಾಗೂ ಕಟ್ಟಡ ಕಾರ್ಮಿಕರು ಉಪಸ್ಥಿತರಿದ್ದರು.