This is the title of the web page
This is the title of the web page

Please assign a menu to the primary menu location under menu

Local News

ಕಾಯಿಲೆಗಳಿಂದ ಬಳಲುತ್ತಿರುವವರಿಗೆ ನೆರವಾದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ 


ಬೆಳಗಾವಿ: ಗ್ರಾಮೀಣ ಕ್ಷೇತ್ರದ ಜನರ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ಕಾಯಿಲೆಗಳಿಗೆ ಒಳಗಾದ ಕ್ಷೇತ್ರದ ಒಟ್ಟು 22 ಜನರಿಗೆ ಅವರ ಆಸ್ಪತ್ರೆಯ ವೆಚ್ಚ ಭರಿಸುವ ಸಲುವಾಗಿ ಒಟ್ಟು 7.36 ಲಕ್ಷ ರೂ,ಗಳಲ್ಲಿ ವಿಂಗಡನೆ ಮಾಡಿ ಈಗಾಗಲೇ ಅವರವರ ಬ್ಯಾಂಕ್ ಖಾತೆಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಜಮಾ ಮಾಡಿಸಿದ್ದಾರೆ.
ಈ ಮೂಲಕ ಅನಾರೋಗ್ಯದಿಂದ ಬಳಲುತ್ತಿರುವ ಕ್ಷೇತ್ರ ವ್ಯಾಪ್ತಿಯ ಹಲವು ಜನರಿಗೆ ಈ ಸೌಲಭ್ಯದಿಂದ ಪ್ರಯೋಜನವಾಗಿದೆ. ಸೌಲಭ್ಯ ಪಡೆದ ಫಲಾನುಭವಿಗಳು ಹಾಗೂ ಕುಟುಂಬದವರು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಜನತೆಯ ಅಹವಾಲುಗಳನ್ನು ಸ್ವೀಕರಿಸಿ, ಅಭಿವೃದ್ಧಿ ಕೆಲಸಗಳ ಕುರಿತಾಗಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಜೊತೆ ಸೇರಿ  ಸುದೀರ್ಘ ಕಾಲ ಜನರೊಂದಿಗೆ ಚರ್ಚೆ ನಡೆಸಿದರು.
ಹಲವು ಗಣ್ಯರು, ಸಾರ್ವಜನಿಕರು ಈ ಸಂದರ್ಭದಲ್ಲಿ ಹಾಜರಿದ್ದರು.

Gadi Kannadiga

Leave a Reply