This is the title of the web page
This is the title of the web page

Please assign a menu to the primary menu location under menu

State

ಎಸ್ಸಿಪಿ ಟಿಎಸ್ಪಿ ಯೋಜನೆಗಳ ಪ್ರಗತಿ ಪರಿಶೀಲನೆ


ಕೊಪ್ಪಳ ಮಾರ್ಚ್ ೨೦ : ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಮಾರ್ಚ ೨೦ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಮಾರ್ಚ ಮಾಹೆಯ ಅಂತ್ಯದೊಳಗೆ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಬೇಕಿರುವುರಿಂದ ಬಾಕಿ ಇರುವ ಭೌತಿಕ ಹಾಗೂ ಆರ್ಥಿಕ ಪ್ರಗತಿಗೆ ಒತ್ತು ಕೊಡಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಪ್ರತಿ ಮಾಹೆ ಸಭೆ ನಡೆಸಿ, ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಗಳ ಭೌತಿಕ ಮತ್ತು ಆರ್ಥಿಕ ಪ್ರಗತಿಗೆ ಮೊದಲಾದ್ಯತೆ ನೀಡಬೇಕು ಎಂದು ತಿಳಿಸಿದಾಗ್ಯು ಸಹ ಕಳಪೆ ಸಾಧನೆ ತೋರಿದ ಇಲಾಖೆಗಳ ಅಧಿಕಾರಿಗಳಿಂದ ವಿವರಣೆ ಕೇಳಿ ನೊಟೀಸ್ ಜಾರಿ ಮಾಡಲು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯ ಅನುಷ್ಠಾನದ ೪೦ ಇಲಾಖೆಗಳಲ್ಲಿ ಇದುವರೆಗೆ ಶೇ.೮೯ರಷ್ಟು ಪ್ರಗತಿಯಾಗಿದೆ ಎಂದು ಸಭೆಗೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಸಹಾಯಕ ಆಯುಕ್ತರಾದ ಬಸವಣ್ಣಪ್ಪ ಕಲಶೆಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯರಾಣಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.


Leave a Reply