This is the title of the web page
This is the title of the web page

Please assign a menu to the primary menu location under menu

Local News

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ: ೬ನೇ ತರಗತಿ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ


ಬೆಳಗಾವಿ,ಜೂನ್೧೬: ಪ್ರಸಕ್ತ ೨೦೨೨-೨೩ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಳಗಾವಿ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ೬ನೇ ತರಗತಿಗೆ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಮೇ ೨೯ ೨೦೨೨ ರಂದು ಪ್ರವೇಶ ಪರೀಕ್ಷೆ ನಡೆಸಿದ್ದು, ಸದರಿ ಪರೀಕ್ಷೆಯ ಫಲಿತಾಂಶವನ್ನು ಜೂನ್ ೧೬ ೨೦೨೨ರಂದು ರಂದು ಸಂಬಂಧಪಟ್ಟ ವಸತಿ ಶಾಲೆಗಳಲ್ಲಿ, ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಳಗಾವಿ ಕಾರ್ಯಾಲಯದಲ್ಲಿ ಹಾಗೂ hಣಣಠಿs://biಣ.ಟಥಿ/೩zಈಖಜvv ಅಂತರಜಾಲದಲ್ಲಿ ಪ್ರಕಟಿಸಲಾಗಿದೆ. ೦೬ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜೂನ್ ೧೮ ೨೦೨೨ ರಂದು ಬೆಳಿಗ್ಗೆ ೧೦ ಗಂಟೆಗೆ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬೆಳಗಾವಿ ಟೌನ, ಕೆ.ಎಸ್.ಸಿ.ಎ ಕ್ರಿಕೇಟ್ ಕ್ರೀಡಾಂಗಣ ಎದುರುಗಡೆ ಕಣಬರ್ಗಿ ರಸ್ತೆ, ರಾಮತೀರ್ಥ ನಗರ ಇಲ್ಲಿ ಕೌನ್ಸಲಿಂಗ್ ನಡೆಸಲಾಗುವುದು. ಸದರಿ ಕೌನ್ಸಲಿಂಗ್‌ಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ, ಹಿಂದಿನ ತರಗತಿಯ ಮೂಲ ಅಂಕಪಟ್ಟಿ, ಆಧಾರ ಕಾರ್ಡ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಇತ್ತೀಚ್ಛಿನ ೦೨ ಭಾವಚಿತ್ರಗಳು ಹಾಗೂ ಇತರೆ ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಒಂದು ವೇಳೆ ನಿಗದಿತ ದಿನದಂದು ಹಾಜರಾಗದೆ ಇದ್ದಲ್ಲಿ ಪ್ರವೇಶವನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೧-೨೯೫೦೩೪೯, ೮೨೧೭೦೮೬೨೭೬ ೯೬೨೦೨೯೪೨೬೪, ೭೪೧೧೨೨೬೮೦೬, ೯೮೪೪೮೪೯೨೩೮, ೯೯೭೨೩೪೫೩೮೩ನ್ನು ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply