This is the title of the web page
This is the title of the web page

Please assign a menu to the primary menu location under menu

State

ಬೊಮ್ಮಾಯಿ ಸಮ್ಮುಖ ವೇದಿಕೆಯಲ್ಲೇ ಸಂಸದ ಡಿಕೆ ಸುರೇಶ್, ಸಚಿವ ಅಶ್ವತ್ಥ ನಾರಾಯಣ ಕಿತ್ತಾಟ


ರಾಮನಗರ: ರಾಮನಗರದಲ್ಲಿಂದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಬೇಕಿದ್ದ ವೇದಿಕೆಯಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿಯೇ ಸಂಸದ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ ಪರಸ್ಪರ ವಾಗ್ವಾದಕ್ಕಿಳಿದ ಪ್ರಸಂಗ ನಡೆದಿದೆ.

ರಾಮನಗರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು ನಾಡಪ್ರಭು ಕೆಂಪೇಗೌಡ, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳ ಅನಾವರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜಿತವಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ನೀರಾವರಿ ಯೋಜನೆಗಳ ಅನುಷ್ಠಾನ ಬಿಜೆಪಿ ಸರ್ಕಾರದಿಂದಲೇ ಸಾಧ್ಯ. ತಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಿಲ್ಲೆಯಲ್ಲಿ ನೆರವೇರಿಸಿದೆ. ಇಲ್ಲಿ ಬಿಜೆಪಿ ಪ್ರತಿನಿಧಿ ಇಲ್ಲದಿದ್ದರೂ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿಲ್ಲ. ತಮ್ಮ ಸರ್ಕಾರದಲ್ಲೇ ಯೋಜನೆಗಳನ್ನು ರೂಪಿಸಿ ತಮ್ಮ ಅವಧಿಯಲ್ಲಿಯೇ ಸಂಪೂರ್ಣಗೊಳಿಸುತ್ತೇವೆ ಎಂದಿದ್ದಾರೆ.

ಈ ಹಂತದಲ್ಲಿ ಸಿಟ್ಟಾದ ಡಿ.ಕೆ. ಸುರೇಶ್, ಸಚಿವ ಅಶ್ವತ್ಥ ನಾರಾಯಣ ನಾರಾಯಣ ಅವರ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ವೇದಿಕೆಯಲ್ಲಿಯೇ ಧರಣಿ ಕುಳಿತಿದ್ದಾರೆ. ಇದರಿಂದ ಆಕ್ರೋಶಗೊಂಡ ಅಶ್ವತ್ಥ ನಾರಾಯಣ, ಸಿಎಂ ಕಾರ್ಯಕ್ರಮಕ್ಕೆ ಅಗೌರವ ತೋರುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಇದರಿಂದ ಮಾತಿಗೆ ಮಾತು ಬೆಳೆದಿದ್ದು, ವಿಧಾನಪರಿಷತ್ ಸದಸ್ಯ ಸಿ. ರವಿ, ಅಶ್ವತ್ಥ ನಾರಾಯಣ ಅವರು ಮಾತನಾಡುತ್ತಿದ್ದ ಮೈಕ್ ಕಿತ್ತುಕೊಂಡ ಘಟನೆಯೂ ನಡೆದಿದೆ. ಸಂಸದ ಹಾಗೂ ಸಚಿವರ ವಾಗ್ವಾದದಿಂದಾಗಿ ತುಸುಹೊತ್ತು ಕಾರ್ಯಕ್ರಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.


Gadi Kannadiga

Leave a Reply