ಕೊಪ್ಪಳ ಜನವರಿ ೦೩ : ಬಡವರು ಸೇರಿದಂತೆ ಜನಸಮೂಹದ ಮೇಲೆ ಅಪಾರ ಪ್ರೀತಿ ಹೊಂದಿರುವ ಅಭಿನವ ಗವಿಸಿದ್ದೇಶ್ವರ ಶ್ರೀಗಳು ಪ್ರತಿ ವರ್ಷವೂ ಜಾತ್ರೆಯಲ್ಲಿ ವಿಶೇಷ ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಸುತ್ತಿರುವುದು ವಿಶೇಷತೆ ಮತ್ತು ಪರಂಪರೆಯಾಗಿ ನಡೆದುಕೊಂಡು ಬಂದಿದೆ.
ಅದೇ ರೀತಿ ಈ ಬಾರಿ ಜಾತ್ರೋತ್ಸವ ಅಂಗವಾಗಿ ಅಂಗಾಂಗ ದಾನ ಜಾಗೃತಿ ಜಾಥಾ ಆರೋಗ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಗವಿಮಠ ಸಂಸ್ಥಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಶ್ರೀ ಗವಿಸಿದ್ದೇಶ್ಚರ ಜಾತ್ರಾ ಮಹೋತ್ಸವ ಅಂಗವಾಗಿ ಅಂಗಾಂಗ ದಾನ ಜಾಗೃತಿ ಜಾಥಾ ಕಾರ್ಯಕ್ರಮವು ಜನವರಿ ೪ರಂದು ಆಯೋಜಿಸಲಾಗಿದೆ.
ಸತ್ತ ಮೇಲೂ ಬದುಕುವ ಯೋಗ ಸಾಯುವವನಿಗೆ ಅಂಗಾಂಗ ಯೋಗ ಎನ್ನುವ ಸಂದೇಶದಿಂದ ಮಠದ ಜಾಗೃತಿ ನಡಿಗೆ-೨೦೨೩ರಡಿಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಂದ ಅಂಗಾಂಗ ದಾನ ಜಾಗೃತಿ ನಡಿಗೆಯು ಶ್ರೀ ಅಭಿನವ ಗವಿಸಿದ್ದೇಶ್ಚರ ಶ್ರೀಗಳ ನೇತೃತ್ವದಲ್ಲಿ ನಡೆಯಲಿದೆ.ಅಂದು ಈ ಜಾಗೃತಿ ಜಾಥಾ ಕಾರ್ಯಕ್ರಮವು ತಾಲೂಕು ಕ್ರೀಡಾಂಗಣದಿಂದ ಆರಂಭಗೊಂಡು ಅಶೋಕ ಸರ್ಕಲ್, ಗಡಿಯಾರ ಕಂಬ ಮಾರ್ಗವಾಗಿ ಶ್ರೀಮಠದವರೆಗೆ ನಡೆಯಲಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ. ಅಂಗಾಂಗ ದಾನ ಜಾಗೃತಿ ಜಾಥಾ ಕುರಿತಂತೆ ಗವಿಸಿದ್ದೇಶ್ವರ ಜಾತ್ರೋತ್ಸವ ಮುಗಿಯುವವರೆಗೂ ಒಂದು ಸ್ಟಾಲ್ ಹಾಕಿ ಜಾಗೃತಿಗೆ ಮತ್ತು ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಖಾಸಗಿ ಆಸ್ಪತ್ರೆಗಳ ಸಹಯೋಗ ಕೂಡ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Gadi Kannadiga > State > ಮಠದ ಜಾಗೃತಿ ನಡಿಗೆ-೨೦೨೩ ಜಾತ್ರೋತ್ಸವ ನಿಮಿತ್ತ ಅಂಗಾಂಗ ದಾನ ಜಾಗೃತಿ ಜಾಥಾ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023