ಗದಗ ಜೂನ್ ೨೬: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಹಯೋಗದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಜುಲೈ ೨೭ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡರ, ನರಗುಂದ ಶಾಸಕ ಸಿ.ಸಿ.ಪಾಟೀಲ, ವಿದಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ರೋಣ ಶಾಸಕ ಜಿ.ಎಸ್.ಪಾಟೀಲ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಉಷಾ ದಾಸರ, ಉಪಾಧ್ಯಕ್ಷೆ ಶ್ರೀಮತಿ ಸುನಂದಾ ಬಾಕಳೆ ಆಗಮಿಸುವರು.
ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ.ಸಿಖಾ , ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಸರ್ವರಿಗೂ ಸ್ವಾಗತ ಕೋರಿದ್ದಾರೆ.
Gadi Kannadiga > State > ನಾಡಪ್ರಭು ಕೆಂಪೇಗೌಡ ಜಯಂತಿ
ನಾಡಪ್ರಭು ಕೆಂಪೇಗೌಡ ಜಯಂತಿ
Suresh26/06/2023
posted on
More important news
ಬೆಳಗಾವಿಯ ಹುಡುಗರ ಸಾಹಸ ” ಪರ್ಯಾಯ”
18/09/2023