This is the title of the web page
This is the title of the web page

Please assign a menu to the primary menu location under menu

State

ನೂತನ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರಿಗೆ ಜಿಲ್ಲಾಡಳಿತದಿಂದ ಆತ್ಮೀಯ ಸ್ವಾಗತ


ಕೊಪ್ಪಳ ಆಗಸ್ಟ್ ೨೩ : ಕೊಪ್ಪಳ ಜಿಲ್ಲೆಗೆ ನೂತನವಾಗಿ ಜಿಲ್ಲಾಧಿಕಾರಿಗಳಾಗಿ ಆಗಮಿಸಿದ ನಲಿನ್ ಅತುಲ್ ಅವರಿಗೆ ಕೊಪ್ಪಳ ಜಿಲ್ಲಾಡಳಿತದಿಂದ ಸ್ವಾಗತ ಸಮಾರಂಭವನ್ನು ಆಯೋಜಿಸಲಾಗಿತ್ತು.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭಾಗಿಯಾಗಿದ್ದ ಕೊಪ್ಪಳ ಜಿಲ್ಲೆಯ ಗಣ್ಯರು, ನಾಗರಿಕರು, ಪತ್ರಕರ್ತರು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯು ನೂತನ ಜಿಲ್ಲಾಧಿಕಾರಿಗಳಿಗೆ ಶಾಲುಹೊದಿಸಿ ಹೂಗುಚ್ಚ ನೀಡಿ ಗೌರವಿಸಿ ಕೊಪ್ಪಳ ಜಿಲ್ಲೆಗೆ ಹೃದಯಪೂರ್ವಕವಾಗಿ ಸ್ವಾಗತಿಸಿದರು.
ಇದೆ ವೇಳೆ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಮಾತನಾಡಿ, ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ಹಂಚಿಕೆ ಮಾಡಿ, ಹನುಮಮಾಲಾ ಕಾರ್ಯಕ್ರಮ, ರಜತ್ ಮಹೋತ್ಸವ, ವಿಧಾನಸಭಾ ಚುನಾವಣೆಯಂತಹ ಹತ್ತಾರು ಕಾರ್ಯಗಳನ್ನು ಯಶಸ್ವಿಗೊಳಿಸಿದ ಬಗ್ಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ಆಡಿರುವ ಮಾತುಗಳೇ ಎಂ.ಸುಂದರೇಶಬಾಬು ಅವರು ದಕ್ಷ ಆಡಳಿತಗಾರರು ಎಂಬುದಕ್ಕೆ ಸಾಕ್ಷಿಯಾಗಿವೆ. ಅವರ ಆಡಳಿತ ಕಾರ್ಯವೈಖರಿಯು ನಮಗೆ ಮಾದರಿಯಾಗಿದೆ. ಅವರ ಮುಂದಿನ ವೃತ್ತಿ ಜೀವನ ಸುಖಕರವಾಗಿರಲಿ ಎಂದರು.
ಗಣ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಅಪೇಕ್ಷಿಸಿದಂತೆ, ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕಾರ್ಯಗಳನ್ನು ಮುಂದುವರೆಸುತ್ತ, ಕೊಪ್ಪಳ ಜಿಲ್ಲೆಗೆ ಜನಸ್ನೇಹಿ ಆಡಳಿತ ಕೊಡುವ ಸಂಕಲ್ಪಕ್ಕೆ ನಾವೆಲ್ಲರು ಬದ್ಧರಾಗಿ ಕಾರ್ಯನಿರ್ವಹಿಸೋಣ ಎಂದರು.
ಸಮಾರಂಭದಲ್ಲಿ, ಹಿಂದಿನ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಮಾತನಾಡಿ, ದಿನೇದಿನೆ ವೇಗವಾಗಿ ಬೆಳೆಯುತ್ತಿರುವ ಜಿಲ್ಲೆಗಳಲ್ಲಿ ಕೊಪ್ಪಳ ಜಿಲ್ಲೆ ಕೂಡ ಒಂದಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಮಾಡಿದ ಸೇವೆಯು ತಮಗೆ ತೃಪ್ತಿ ತಂದಿದೆ. ಇನ್ನು ಸಹ ಉತ್ತಮವಾದ ಕಾರ್ಯ ಮಾಡಲು ಕೊಪ್ಪಳ ಜಿಲ್ಲೆಯಲ್ಲಿ ಸಾಕಷ್ಟು ಅವಕಾಶವಿದ್ದು ಉತ್ತಮ ಕಾರ್ಯಗಳನ್ನು ಮುಂದುವರೆಸಲು ನೂತನ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರಿಗೆ ಜಿಲ್ಲೆಯ ಸಾರ್ವಜನಿಕರು, ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಕಾರ ನೀಡಬೇಕು ಎಂದು ಕೋರಿದರು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ., ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಹಾಗೂ ಇನ್ನೀತರರು ಇದ್ದರು. ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ ನಿರೂಪಿಸಿದರು.


Leave a Reply