This is the title of the web page
This is the title of the web page

Please assign a menu to the primary menu location under menu

Local News

ಬೆಳಗಾವಿಯಲ್ಲಿ ಒಗ್ಗಟ್ಟಿದೆ ರಾಜ್ಯದಲ್ಲಿ ಬಿಜೆಪಿ ಗೆಲ್ಲಲಿದೆ: ನಳೀನಕುಮಾರ್ ಕಟೀಲ್


ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ ಗುಂಪುಗಾರಿಕೆಯ ಗೊಂದಲವಿಲ್ಲದೇ ಎಲ್ಲರೂ ಒಗ್ಗಟ್ಟಾಗಿದ್ದಾರೆ ಇನ್ನು ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಬಹುಮತಗಳಿಂದ ಗೆಲವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಾಯುವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿಗಳಾ ಸ್ಪರ್ಧೆಗಿಳಿದ ಹಣಮಂತ ನಿರಾಣಿ ಮತ್ತು ಅರುಣ ಶಹಪುರ ಅವರ ನಾಮಪತ್ರ ಸಲ್ಲಿಕೆಗೆ ಬೆಳಗಾವಿಗೆ ಆಗಮಿಸಿದ ಅವರು  ತ್ರಿವಳಿ ಜಿಲ್ಲೆಗಳ  ಸಚಿವರು, ಸಂಸದರು, ಶಾಸಕರು ಮತ್ತು ಪದಾಧಿಕಾರಿಗಳ ಸಭೆ ನಡೆಸಿ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ನಾಲ್ಕು ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ನಡೆಯುತ್ತಿದೆ. ಬೆಳಗಾವಿಯಲ್ಲಿ ಅರುಣ ಶಾಹಪುರ ಮತ್ತು ಹಣಮಂತ ನಿರಾಣಿ ಅವರು ಎರಡನೇ ಬಾರಿ ಸ್ಪರ್ಧೆ ಮಾಡುತ್ತಿದ್ದಾರೆ. ಮತ್ತು ವಿಧಾನಪರಿಷತ್ ಸದಸ್ಯರಾಗಿ ಬಸವರಾಜ್ ಹೊರಟ್ಟಿ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಈ ನಾಲ್ಕು ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಕಳೆದ ಬಾರು ಎರಡು ಸ್ಥಾನಗಳಲ್ಲಿ ಗೆದ್ದಿದ್ದೇವು. ಆದರೆ ಈ ಬಾರಿ ನಾಲ್ಕಕ್ಕೆ ನಾಲ್ಕು ಸ್ಥಾನಗಳನ್ನು ಬಿಜೆಪಿ ಪಡೆಯುತ್ತದೆ. ಇದಕ್ಕೆ ಪೂರಕವಾಗಿ ಇಲ್ಲಿ ಮತ್ತು ಹುಬ್ಬಳ್ಳಿಯಲ್ಲಿ ನಾಮಪತ್ರ ಸಲ್ಲಿಕೆಗೆ ಆಗಮಿಸಿದ್ದೇನೆ ನಾಮಪತ್ರ ಸಲ್ಲಿಕೆಯ ಬಳಿಕ ಮಂಗಳೂರಿಗೆ ತೆರಳಲಿದ್ದೇನೆ ಎಂದರು.

ಬೆಳಗಾವಿ ಬಿಜೆಪಿಯಲ್ಲಿ ಬಿನ್ನಮತ ಗುಂಪುಗಾರಿಕೆ ಇದ್ಯಾವಯದು ಇಲ್ಲ ಅಭಿಪ್ರಾಯಗಳಲ್ಲಿ ವ್ಯತ್ಯಾಸಗಳು ಇರುತ್ತವೆ. ಅದನ್ನು ಸರಿ ಮಾಡಿಕೊಂಡು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.


Gadi Kannadiga

Leave a Reply