ಗದಗ ಮಾರ್ಚ ೨೮: ಮಹಾತ್ಮಗಾಂಧಿ ಗ್ರಾಮೀಣ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ೨೦೨೩ ಏಪ್ರೀಲ್ ೦೧ ರಿಂದ ಒಂದು ದಿನಕ್ಕೆ ರೂ.೩೧೬ ಕೂಲಿಯನ್ನು ನಿಗದಿಪಡಿಸಲಾಗಿದೆ. ಗ್ರಾಮೀಣ ಭಾಗದ ಬಡ ಕುಟುಂಬಗಳ ಜೀವನೋಪಾಯದ ಭದ್ರತೆಯನ್ನು ಹೆಚ್ಚಿಸುವ ಮತ್ತು ಸ್ಥಳೀಯವಾಗಿ ನಿರಂತರ ಉದ್ಯೋಗ ಒದಗಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲ ಗ್ರಾಮಪಂಚಾಯತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲಾಗುತ್ತಿದೆ. ಯೋಜನೆಯಡಿ ಅರ್ಹ ನೋಂದಾಯಿತ ಕುಟುಂಬಗಳಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯವು ರೂ. ೩೦೯ ರಿಂದರೂ. ೩೧೬ ಕೆ ್ಕಕೂಲಿದರವನ್ನು ಹೆಚ್ಚಿಸಲಾಗಿದ್ದು, ಉದ್ಯೋಗ ಚೀಟಿದಾರ ಕೂಲಿಕಾರರು ಈ ಸೌಲಭ್ಯವನ್ನು ೨೦೨೩ ರ ಏಪ್ರೀಲ್ ೦೧ ರಿಂದ ಪಡೆಯಬಹುದಾಗಿದೆ.
ಪ್ರಸಕ್ತ ಸಾಲಿನಿಂದ ಜಲಸಂಜೀವಿನಿ ಪರಿಕಲ್ಪನೆಯಡಿ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಮಾಡುವುದು ಪ್ರಮುಖ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತಿಯಲ್ಲಿ ನೈಸರ್ಗಿಕ ನಿರ್ವಹಣಾ ಉಪಚಾರದ ಸರೋವರ, ಗ್ರಾಮೀಣ ಕೆರೆಹೂಳೆತ್ತುವ ಕಾಮಗಾರಿ, ಕೃಷಿಹೊಂಡ, ಬದು ನಿರ್ಮಾಣ, ಕೊಳವೆ ಭಾವಿ ಮರುಪೂರಣ ಘಟಕ, ನಾಲಾ ಅಭಿವೃದ್ಧಿ, ಅರಣೀಕರಣ, ರೇಷ್ಮೆಬೆಳೆ, ತೋಟಗಾರಿಕೆ, ಗೋಕಟ್ಟೆ , ನಿರ್ಮಾಣ ಇನ್ನು ಹಲವು ಕಾಮಗಾರಿಗಳಲ್ಲಿ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಲು ಯೋಜನೆ ರೂಪಿಸಲಾಗಿದೆ.
ಮನರೇಗಾ ಯೋಜನೆಯಡಿ ಪ್ರಸಕ್ತ ೨೦೨೩ರ ಏಪ್ರೀಲ್ ೦೧ ರಿಂದ ಒಂದು ದಿನಕ್ಕೆ ರೂ. ೩೧೬ ಕೂಲಿದರವನ್ನು ನಿಗದಿಪಡಿಸಲಾಗಿದ್ದು, ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರರಿಗೆ ಕೂಲಿ ಹಣವನ್ನು ಇ-ಎಫ್‌ಎಂಎಸ್ ಮುಖಾಂತರ ನೇರವಾಗಿ ಕೂಲಿಕಾರರ ವೈಯಕ್ತಿಕ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಹಾಗೂ ಮಹಿಳೆ ಮತ್ತು ಪುರುಷರಿಗೆ ಸಮಾನ ಕೂಲಿ ನೀಡುವುದರಿಂದ ಸದರಿ ಪ್ರಯೋಜನವನ್ನು ಉದ್ಯೋಗ ಚೀಟಿ ಹೊಂದಿರುವ ಗ್ರಾಮೀಣ ಕುಟುಂಬಗಳು ಪಡೆದುಕೊಳ್ಳುವುದು, ಹಾಗೂ ಜಿಲ್ಲೆಯ ಎಲಾ ್ಲಗ್ರಾಮ ಪಂಚಾಯತಿಗಳಲ್ಲಿ ಬೆಸಿಗೆ ಕಾಲ ಸಮಿಪಿಸುತ್ತಿರುವ ಹಿನ್ನಲೆಯಲ್ಲಿ ಗ್ರಾಮೀಣ ಜನರು ಉದ್ಯೋಗ ಬೇಡಿಕೆ ನೀಡಿದ ತಕ್ಷಣ ಉದ್ಯೋಗ ಒದಗಿಸಲು ಹಾಗೂ ಸಕಾಲದಲ್ಲಿ ಕೂಲಿ ಪಾವತಿ ಮಾಡಲು ಎಲಾ ್ಲಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಅನುಷ್ಟಾನ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.
ಯೋಜನೆಯ ಐ.ಇ.ಸಿಚಟುವಟಿಕೆಗಳ ಮುಖಾಂತರ ಗ್ರಾಮೀಣ ಪ್ರದೇಶಗಳಲ್ಲಿನ ಹಿರಿಯ ನಾಗರಿಕರಿಗೆ, ವಿಶೇಷಚೇತನರಿಗೆ, ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ಮಹಿಳೆಯರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಲು ಅಗತ್ಯ ಕ್ರಮ ವಹಿಸಲಾಗಿದ್ದು, ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಮಾಹಿತಿ, ಶಿಕ್ಷಣಮತ್ತು (ಐ.ಇ.ಸಿ) ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೂಲಿಕಾರರನ್ನು ಸಂಘಟಿಸಿ ೫೦ ಕೂಲಿಕಾರರಿರುವ ಕಾರ್ಮಿಕ ಸಂಘಗಳನ್ನು ರಚಿಸಿ ಅದಕ್ಕೆ ಒಬ್ಬ ಕಾಯಕ ಬಂಧುವನ್ನು ನೇಮಿಸಿ ಅವರುಗಳ ಮೂಲಕ ಕೂಲಿಬೇಡಿಕೆ ಪಡೆಯಲು ಗ್ರಾಮಪಂಚಾಯತಿಗಳ ವಾರ್ಡಗಳಲ್ಲಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ವಿಶೇಷ ಅಭಿಯಾನಗಳನ್ನು ಆಯೋಜಿಸಿ ಕೂಲಿಕಾರರಿಂದ ಕೂಲಿ ಬೇಡಿಕೆ ಪಡೆದು ಸಮಯಕ್ಕೆ ಸರಿಯಾಗಿ ಕೆಲಸ ಒದಗಿಸಲಾಗುವುದು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುಶೀಲಾ ಬಿ ತಿಳಿಸಿದರು.