This is the title of the web page
This is the title of the web page

Please assign a menu to the primary menu location under menu

State

ರಾಷ್ಟ್ರೀಯ ರಕ್ತದಾನ ದಿನಾಚರಣೆ ಸಮಾರಂಭ ಹಾಗೂ ರಕ್ತದಾನ ಶಿಬಿರ


ಗದಗ ಸೆಪ್ಟೆಂಬರ್ ೩೦: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ವಾರ್ತಾ ಇಲಾಖೆ, ಜಿಮ್ಸ್ ರಕ್ತ ನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ , ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ , ಐ.ಎಂ.ಎಂ. ರಕ್ತ ಭಂಡಾರ , ಎನ್.ಎಸ್.ಎಸ್., ಎನ್.ಸಿ.ಸಿ. ಸಮುದಾಯ ಆರೋಗ್ಯಾಧಿಕಾರಿಗಳ ಸಂಘ, ರೆಡ್ ರಿಬ್ಬನ್ ಕ್ಲಬ್ ಹಾಗೂ ರೋಟರಿ ಕ್ಲಬ್ ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರಕ್ತದಾನ ದಿನಾಚರಣೆಯ ಸಮಾರಂಭ -೨೦೨೨ ಹಾಗೂ ರಕ್ತದಾನ ಶಿಬಿರವನ್ನು ಅಕ್ಟೋಬರ್ ೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣ ಎದುರಿಗೆ ರೋಟರಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.
ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರ ಘನ ಉಪಸ್ಥಿತಿಯಲ್ಲಿ ಜರುಗುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಶಾಸಕ ಎಚ್.ಕೆ.ಪಾಟೀಲ ವಹಿಸುವರು.
ಮುಖ್ಯ ಅತಿಥಿಗಳಾಗಿ ರೋಣ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಕಳಕಪ್ಪ ಬಂಡಿ, ಸಂಸದರುಗಳಾದ ಶಿವಕುಮಾರ ಉದಾಸಿ , ಪಿ.ಸಿ. ಗದ್ದಿಗೌಡರ , ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್ , ಸಲೀಂ ಅಹ್ಮದ್ , ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ, ಮಾರ್ಕೆಟಿಂಗ್ ಕಮ್ಯುನಿಕೇಷನ್ ಆಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ನ ಅಧ್ಯಕ್ಷರಾದ ಎಂ.ಎಸ್. ಕರಿಗೌಡ್ರ , ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಉಷಾ ದಾಸರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ಧಪ್ಪ ಪಲ್ಲೇದ, ಉಪಾಧ್ಯಕ್ಷರಾದ ಶ್ರೀಮತಿ ಸುನಂದಾ ಬಾಕಳೆ , ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಶೀಲಾ ಬಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಶಿವಪ್ರಕಾಶ ದೇವರಾಜ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಕೆ.ಗುರುಪ್ರಸಾದ , ರೋಟರಿ ಕ್ಲಬ್ ವೆಲ್‌ಫೇರ್ ಸೊಸೈಟಿ ಅಧ್ಯಕ್ಷರಾದ ಡಾ. ಶ್ರೀಧರ ಸುಲ್ತಾನಪುರ ಆಗಮಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ ನುಚ್ಚಿನ್ , ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಜಿ.ಎಸ್. ಪಲ್ಲೇದ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಅರುಂಧತಿ ಕುಲಕರ್ಣಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.


Gadi Kannadiga

Leave a Reply