ಗದಗ ಡಿಸೆಂಬರ್ ೨೨: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ಜಿಲ್ಲಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ “ ಗ್ರಾಹಕರ ಆಯೋಗಗಳಲ್ಲಿನ ಪ್ರಕರಣಗಳ ಪರಿಣಾಮಕಾರಿ ವಿಲೇವಾರಿ” ಎಂಬ ಘೋಷವಾಕ್ಯದಡಿ “ರಾಷ್ಟ್ರೀಯ ಗ್ರಾಹಕರ ದಿನಾಚರಣೆ -೨೦೨೨” ಯನ್ನು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಡಿಸೆಂಬರ್ ೨೬ ರಂದು ಬೆಳಿಗ್ಗೆ ೧೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರದ ಪ್ರಭಾರಿ ಅಧ್ಯಕ್ಷ ಹಾಗೂ ಕೌಟುಂಬಿಕ ನ್ಯಾಯಾಲಯದ ೧ ನೇ ಅಧಿಕ ಪ್ರಧಾನ ನ್ಯಾಯಾಧೀಶರಾದ ಖಾದರಸಾಬ ಅವರ ಘನಉಪಸ್ಥಿತಿಯಲ್ಲಿ ಜರುಗುವ ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಉದ್ಘಾಟಿಸುವರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಡಿ.ವೈ.ಬಸಾಪುರ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಬಿ.ಸುಶೀಲಾ , ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿಗಳು, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಯಶೋಧಾ ಪಾಟೀಲ ಹಾಗೂ ರಾಜು ನಾಮದೇವ ಮೇತ್ರಿ , ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಎಂ. ಮೌಲ್ವಿ ಆಗಮಿಸುವರು. ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎಸ್.ಜಿ.ಪಲ್ಲೇದ, ಮಾನ್ವಿ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಸ್.ಆರ್. ಪಾಟೀಲ ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಅಂಕಿತ ಅಧಿಕಾರಿ ಡಾ. ಜಗದೀಶ ಜಂಗಿ , ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಗಂಗಪ್ಪ ಎಂ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಆರ್.ಕೆ. ಕೊಪ್ಪರ , ಕೆ.ಎಫ್.ಸಿ.ಎಸ್.ಸಿ. ಜಿಲ್ಲಾ ವ್ಯವಸ್ಥಾಪಕರಾದ ಶ್ರೀಮತಿ ಲಕ್ಷ್ಮೀ ಶಿವಾಜಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.
Gadi Kannadiga > State > ರಾಷ್ಟ್ರೀಯ ಗ್ರಾಹಕರ ದಿನಾಚರಣೆ-೨೦೨೨
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023