This is the title of the web page
This is the title of the web page

Please assign a menu to the primary menu location under menu

Local News

ಮೇ.೧೬ ರಂದು ರಾಷ್ಟ್ರೀಯ ಡೆಂಗು ದಿನ ಕಾರ್ಯಕ್ರಮ


ಬೆಳಗಾವಿ, ಮೇ.೧೫ : ೨೦೨೩-೨೪ನೇ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮೇ.೧೬ ೨೦೨೩ ರಂದು ರಾಷ್ಟ್ರೀಯ ಡೆಂಗು ದಿನ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ.
ವಿಶ್ವ ಡೆಂಗು ಹಾಗೂ ಚಿಕೂನ್ ಗುನ್ಯಾ ರೋಗ ಹರಡುವದನ್ನು ತಡೆಗಟ್ಟಲು ತಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳು :
ಸೊಳ್ಳೆಗಳ ನಿಯಂತ್ರಣ ಒಂದೇ ಡೆಂಗು ರೋಗದ ಹತೋಟಿಗೆ ಮುಖ್ಯ ವಿಧಾನ. ಸೊಳ್ಳೆಗಳು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್ಮು ಬ್ಯಾರಲ್, ಮಣ್ಣಿನ ಮಡಿಕೆ, ಉಪಯೋಗಿಸಿದ ಒರಳುಕಲ್ಲು ಮುಂತಾದ ಕಡೆ ಶೇಖರವಾಗುವ ನೀರಿನಲ್ಲಿ ಉತ್ಪತಿಯಾಗುವದರಿಂದ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು.
ಎಲ್ಲಾ ನೀರಿನ ತೊಟ್ಟಿ, ಡ್ರಮ್ಮು, ಬ್ಯಾರಲ್ ಏರ್ ಕೂಲರ್ ಇತ್ಯಾದಿಗಳನ್ನು ವಾರಕೊಮ್ಮೆ ಖಾಲಿ ಮಾಡಿ, ಒಣಗಿಸಿ ಮತ್ತೆ ನೀರನ್ನು ಭರ್ತಿ ಮಾಡಿಕೊಳ್ಳುವುದು.ನೀರು ಖಾಲಿ ಮಾಡಲು ಸಾಧ್ಯವಿಲ್ಲದ ತೊಟ್ಟಿ ಮುಂತಾದವುಗಳನ್ನು ಸೊಳ್ಳೆಗಳು ಒಳಗೆ ನುಸಳದಂತೆ ಸರಿಯಾದ ಮುಚ್ಚಳದಿಂದ ಮುಚ್ಚುವುದು.
ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳೆನೀರಿನ ಚಿಪ್ಟು, ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು. ಅಥವಾ ಸೂಕ್ತ ವಿಲೇವಾರಿ ಮಾಡುವುದು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ಪರದೆಗಳನ್ನು ಬಳಸಿ, ಸೊಳ್ಳೆಗಳು ಕಚ್ಚದಂತೆ ಎಚ್ಚರಿಕೆ ವಹಿಸುವುದು.
ಸ್ವಚ್ಚವಾದ ನೀರಿನಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಹೆಚ್ಚಿಸುವ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಅಂತಹ ಸ್ಥಳಗಳಲ್ಲಿ ಲಾರ್ವಾಹಾರಿ ಮೀನುಗಳನ್ನು ಗಪ್ಪಿ, ಗಂಬೂಷಿಯಾ ಮೀನುಗಳನ್ನು ಬಿಡುವದರಿಂದ ಜೈವಿಕ ನಿಯಂತ್ರಣ ಮಾಡಬಹುದು.
ಕೆರೆ,ಕುಂಟೆ, ಮನೆಯಲ್ಲಿರುವ ದೊಡ್ಡ ದೊಡ್ಡ ತೊಟ್ಟೆಗಳಲ್ಲಿ ಸೊಳ್ಳೆಗಳು ಉತ್ಪತಿಯಾಗದಂತೆ ತಡೆಗಟ್ಟಲು ಲಾರ್ವಾಹಾರಿ ಮೀನುಗಳಾದ ಗಪ್ಪಿ, ಗಂಬೂಷಿಯಾ ಮೀನುಗಳನ್ನು ಬಿಡಬೇಕು.
ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದ ಹಾಗೂ ಸವದತ್ತಿ ತಾಲೂಕಿನ ಮುನವಳ್ಳಿ ಜಲಾಶಯಗಳಿಂದ ಮೀನುಗಾರಿಕಾ ಇಲಾಖೆಯಿಂದ ಲಾರ್ವಾಹಾರಿಗಳನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply