This is the title of the web page
This is the title of the web page

Please assign a menu to the primary menu location under menu

Local News

ರಾಷ್ಟ್ರೀಯ ಶಿಕ್ಷಣ ನೀತಿ -೨೦೨೦ ವಿಚಾರಗೋಷ್ಠಿ: ಏ.೩೦, ಮೇ.೧ ರಂದು


ಬೆಳಗಾವಿ,ಏ.೨೯: ಭಾರತೀಯ ಶಿಕ್ಷಣ ಮಂಡಳ (ಉತ್ತರ ಕರ್ನಾಟಕ ಪ್ರಾಂತ)ವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸಹಯೋಗದಲ್ಲಿ ಶನಿವಾರ(ಏ.೩೦) ಹಾಗೂ ಭಾನುವಾರ(ಮೇ.೧) ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ -೨೦೨೦ ರ ವಿಷಯ ಕುರಿತು ಎರಡು ದಿನಗಳ ರಾಷ್ಟ್ರ ಮಟ್ಟದ ವಿಚಾರ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವರಾದ ಡಾ. ಸಿ. ಏನ್. ಅಶ್ವತ್ಥ ನಾರಾಯಣ್ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಬಿ. ಸಿ. ನಾಗೇಶ್ ಅವರು ಗೌರವ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ್ ಸಂಘದ ಸಹ ಕಾರ್ಯನಿರ್ವಾಹಕರಾದ ಡಾ. ಮನಮೋಹನ್ ವೈದ್ಯ ಅವರು ಮುಖ್ಯ ಭಾಷಣವನ್ನು ಮಾಡಲಿದ್ದಾರೆ. ಭಾರತೀಯ ಶಿಕ್ಷಣ ಮಂಡಳದ ರಾಷ್ಟ್ರೀಯ ಅಧ್ಯಕ್ಷರಾದ ಪ್ರೊ. ಸಚ್ಚಿದಾನಂದ ಜೋಶಿ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ರಾಷ್ಟ್ರೀಯ ಗೋಷ್ಠಿಯಲ್ಲಿ ರಾಷ್ಟ್ರದ ಹಾಗೂ ರಾಜ್ಯದ ಬೇರೆ ಕಡೆಗಳಿಂದ ಆಗಮಿಸಿದ ಶಿಕ್ಷಣ ತಜ್ಞರು ಹಾಗೂ ಪ್ರಾಧ್ಯಾಪಕರು ಭಾಗವಹಿಸಲಿದ್ದಾರೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.


Gadi Kannadiga

Leave a Reply