ಬೆಳಗಾವಿ, ಡಿ.೨೭ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ (ಡಿ.೨೯) ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಬೆಳಿಗ್ಗೆ ೧೧ ಗಂಟೆಗೆ ರಾಷ್ಟö್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಆಚರಿಸಲಾಗುವುದು.
ಜಲ ಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಗೋವಿಂದ ಕಾರಜೋಳ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಜರಾಯಿ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಅನೀಲ ಬೆನಕೆ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಆಮಂತ್ರಿತರಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಮಹೇಶ ಕುಮಠಳ್ಳಿ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಐಹೊಳೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ ಅವರು ಆಗಮಿಸಲಿದ್ದಾರೆ.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೊಲೀಸ್ ಆಯುಕ್ತರಾದ ಡಾ. ಎಂ.ಬಿ ಬೋರಲಿಂಗಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ದರ್ಶನ್ ಹೆಚ್.ವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ರಾಷ್ಟö್ರಕವಿ ಕುವೆಂಪು ಜನ್ಮ ದಿನಾಚರಣೆ ಡಿ.೨೯ ರಂದು
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಮಹಿಳೆ ನಾಪತ್ತೆ
17/03/2023
ನುಡಿದಂತೆ ನಡೆದ ಶಾಸಕ ಅನಿಲ ಬೆನಕೆ
17/03/2023